ಹಿಂದೂ ಜನಜಾಗೃತಿ ಸಮಿತಿಯಿಂದ ಎರಡು ದಿನಗಳ ರಾಜ್ಯಮಟ್ಟದ ಹಿಂದೂ ರಾಷ್ಟ್ರ ಅಧಿವೇಶನದ ಪ್ರಾರಂಭ !
ಬೆಂಗಳೂರು : ‘ಇಂದು ದೇಶದಲ್ಲಿ ಲ್ಯಾಂಡ್ ಜಿಹಾದ್ ಮೂಲಕ ಅಮಾಯಕ ಹಿಂದೂಗಳ ಸ್ವತ್ತನ್ನು ಕಸಿದುಕೊಳ್ಳಲಾಗುತ್ತಿದೆ. ಅದೇ ರೀತಿ ಲವ್ ಜಿಹಾದ್ ಮೂಲಕ ಹಿಂದೂ ಯುವತಿಯರನ್ನು ಮತಾಂತರಗೊಳಿಸುವ ಷಡ್ಯಂತ್ರ ನಿರಂತರವಾಗಿ ನಡೆಯುತ್ತಿದೆ. ಈ ರೀತಿ ದೇಶಾದ್ಯಂತ ಮತಾಂಧರು ಕಾನೂನಿನ ಯಾವುದೇ ಭಯವಿಲ್ಲದೇ ಜಿಹಾದ್ ನಡೆಸುತ್ತಿದ್ದಾರೆ. ಹಿಂದೂ ಸಂಘಟನೆಗಳು ಇದರ ವಿರುದ್ಧ ಸಂಘಟಿತರಾಗಿ ಹೋರಾಡುವುದು ಅವಶ್ಯಕವಾಗಿದೆ’ ಎಂದು ಶ್ರೀ. ಚಕ್ರವರ್ತಿ ಸೂಲಿಬೆಲೆಯವರು ಕರೆ ನೀಡಿದರು. ಅವರು ಹಿಂದೂ ಜನಜಾಗೃತಿ ಸಮಿತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಿದ ರಾಜ್ಯ ಮಟ್ಟದ ಹಿಂದೂ ರಾಷ್ಟ್ರ-ಜಾಗೃತಿ ಅಧಿವೇಶನದಲ್ಲಿ ಮಾತನಾಡುತ್ತಿದ್ದರು. ಲೇಖಕಿ ಎಸ್.ಆರ್ ಲೀಲಾ, ಸನಾತನ ಸಂಸ್ಥೆಯ ಧರ್ಮಪ್ರಚಾರಕರಾದ ಪೂಜ್ಯನಿಯ ರಮಾನಂದ ಗೌಡ, ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರ ಶ್ರೀ. ರಮೇಶ್ ಶಿಂದೆ ಹಾಗೂ ಶ್ರೀ. ಚಕ್ರವರ್ತಿ ಸೂಲಿಬೆಲೆ ಇವರು ದೀಪ ಪ್ರಜ್ವಲನೆ ಮೂಲಕ ಅಧಿವೇಶನವನ್ನು ಉದ್ಘಾಟಿಸಿದರು. ರಾಜ್ಯಾದ್ಯಂತ ವಿವಿಧ ಜಿಲ್ಲೆಗಳಿಂದ, ವಿವಿಧ ಹಿಂದೂ ಸಂಘಟನೆಗಳಿಂದ 300 ಕ್ಕೂ ಹೆಚ್ಚು ಸಂಘಟನಾ ಪ್ರಮುಖರು ಉಪಸ್ಥಿತರಿದ್ದರು. ಎರಡು ದಿನಗಳ ಈ ಅಧಿವೇಶನದಲ್ಲಿ ಹಿಂದುತ್ವದ ವಿವಿಧ ಕ್ಷೇತ್ರಗಳಲ್ಲಿ ಕಾರ್ಯ ಮಾಡುತ್ತಿರುವ ಹಿಂದೂ ಕಾರ್ಯಕರ್ತರು, ಹಿಂದೂ ಸಂಘಟನೆಗಳ ಪ್ರಮುಖರು ತಮ್ಮ ಕಾರ್ಯದ ಆನುಭವಗಳನ್ನು ಹಂಚಿಕೊಳ್ಳಲಿದ್ದು, ಪ್ರಸ್ತುತ ಹಿಂದೂ ಧರ್ಮದ ಮೇಲಾಗುತ್ತಿರುವ ಆಘಾತಗಳ ಬಗ್ಗೆ ಹಿಂದೂಗಳಲ್ಲಿ ಜಾಗೃತಿ ಮೂಡಿಸಲು ಯಾವ ರೀತಿ ಕಾರ್ಯ ಮಾಡಬಹುದು, ಈ ವಿಷಯಗಳ ಕುರಿತು ಚರ್ಚೆ ನಡೆಯಲಿವೆ.