ಸ್ತ್ರೀಯರು ಹಣೆಯಲ್ಲಿ ಕುಂಕುಮವನ್ನು ಹಚ್ಚಿಕೊಳ್ಳುವುದರಿಂದ ಅವರಿಗೆ ಆಧ್ಯಾತ್ಮಿಕ ಸ್ತರದಲ್ಲಿ ಲಾಭವಾಗುವುದು

‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ವು ‘ಯು.ಎ.ಎಸ್. (ಯುನಿವರ್ಸಲ್‌ ಔರಾ ಸ್ಕ್ಯಾನರ್‌)’ ಉಪಕರಣದಿಂದ ಮಾಡಿದ ವೈಜ್ಞಾನಿಕ ಪರೀಕ್ಷಣೆ

‘ಕುಂಕುಮವು ಪಾವಿತ್ರ್ಯದ ಮತ್ತು ಮಾಂಗಲ್ಯದ ಪ್ರತೀಕವಾಗಿದೆ. ಕುಂಕುಮದಲ್ಲಿ ದೇವತೆಯ ಚೈತನ್ಯವನ್ನು ಗ್ರಹಿಸುವ ಮತ್ತು ಪ್ರಕ್ಷೇಪಿಸುವ ಕ್ಷಮತೆಯಿದೆ. ಸ್ತ್ರೀಯರು ತಮ್ಮ ಭ್ರೂಮಧ್ಯದಲ್ಲಿ (ಹಣೆಯಲ್ಲಿ) ಅನಾಮಿಕಾದಿಂದ (ಕಿರುಬೆರಳಿನ ಪಕ್ಕದ ಬೆರಳಿನಿಂದ) ಕುಂಕುಮವನ್ನು ಹಚ್ಚಿಕೊಳ್ಳಬೇಕು. ‘ಸ್ತ್ರೀಯರು ಹಣೆಯಲ್ಲಿ ಕುಂಕುಮವನ್ನು ಹಚ್ಚಿಕೊಳ್ಳುವುದರಿಂದ ಅವರಿಗೆ ಆಧ್ಯಾತ್ಮಿಕ ದೃಷ್ಟಿಯಲ್ಲಿ ಏನು ಲಾಭವಾಗುತ್ತದೆ ?’, ಎಂಬುದನ್ನು ವಿಜ್ಞಾನದ ಮೂಲಕ ಅಧ್ಯಯನ ಮಾಡಲು ‘ಯು.ಎ.ಎಸ್. (ಯುನಿವರ್ಸಲ್‌ ಔರಾ ಸ್ಕ್ಯಾನರ್‌)’ ಈ ಉಪಕರಣದಿಂದ ಒಂದು ಪರೀಕ್ಷಣೆಯನ್ನು ಮಾಡಲಾಯಿತು. ಈ ಪರೀಕ್ಷಣೆಯ ನಿರೀಕ್ಷಣೆಗಳ ವಿವೇಚನೆ ಮತ್ತು ಅಧ್ಯಾತ್ಮಶಾಸ್ತ್ರೀಯ ವಿಶ್ಲೇಷಣೆಯನ್ನು ಮುಂದೆ ಕೊಡಲಾಗಿದೆ.

ಯು.ಎ.ಎಸ್. ಉಪಕರಣದ ಮೂಲಕ ಪರೀಕ್ಷಣೆ ಮಾಡುತ್ತಿರುವ ಶ್ರೀ. ಆಶಿಷ್ ಸಾವಂತ್

೧. ಪರೀಕ್ಷಣೆಯ ನಿರೀಕ್ಷಣೆಗಳ ವಿವೇಚನೆ

ಈ ಪರೀಕ್ಷಣೆಯಲ್ಲಿ ಆಧ್ಯಾತ್ಮಿಕ ತೊಂದರೆಯಿರುವ ಇಬ್ಬರು ಸಾಧಕಿಯರು ಮತ್ತು ಆಧ್ಯಾತ್ಮಿಕ ತೊಂದರೆ ಇಲ್ಲದಿರುವ ಇಬ್ಬರು ಸಾಧಕಿಯರು ಹಣೆಗೆ ಕುಂಕುಮವನ್ನು ಹಚ್ಚಿಕೊಳ್ಳುವ ಮೊದಲು ಹಾಗೂ ಕುಂಕುಮವನ್ನು ಹಚ್ಚಿಕೊಂಡ ನಂತರ ‘ಯು.ಎ.ಎಸ್‌.’ ಉಪಕರಣದ ಮೂಲಕ ಅವರ ಪರೀಕ್ಷಣೆಗಳನ್ನು ಮಾಡಲಾಯಿತು.

೧ ಅ. ಹಣೆಗೆ ಕುಂಕುಮವನ್ನು ಹಚ್ಚಿಕೊಂಡಿದ್ದರಿಂದ ಆಧ್ಯಾತ್ಮಿಕ ತೊಂದರೆಯಿರುವ ಮತ್ತು ಆಧ್ಯಾತ್ಮಿಕ ತೊಂದರೆಯಿಲ್ಲದಿರುವ ಸಾಧಕಿಯರ ಮೇಲೆ ಸಕಾರಾತ್ಮಕ ಪರಿಣಾಮವಾಗುವುದು : ಇದು ಮುಂದೆ ಕೊಟ್ಟಿರುವ ಕೋಷ್ಟಕದಿಂದ ಗಮನಕ್ಕೆ ಬರುತ್ತದೆ.

ಮೇಲಿನ ಕೋಷ್ಟಕದಿಂದ ಮುಂದಿನ ಅಂಶಗಳು ಗಮನಕ್ಕೆ ಬರುತ್ತವೆ.

೧. ಕುಂಕುಮದಲ್ಲಿ ನಕಾರಾತ್ಮಕ ಊರ್ಜೆ ಸ್ವಲ್ಪವೂ ಇಲ್ಲ, ಬದಲಾಗಿ ತುಂಬಾ ಪ್ರಮಾಣದಲ್ಲಿ ಸಕಾರಾತ್ಮಕ ಊರ್ಜೆಯಿದೆ.

೨. ಕುಂಕುಮವನ್ನು ಹಚ್ಚಿಕೊಂಡ ನಂತರ ಆಧ್ಯಾತ್ಮಿಕ ತೊಂದರೆಯಿರುವ ಇಬ್ಬರೂ ಸಾಧಕಿಯರಲ್ಲಿನ ನಕಾರಾತ್ಮಕ ಊರ್ಜೆಯು ಕಡಿಮೆ ಅಥವಾ ಇಲ್ಲವಾಗಿ ಅವರಲ್ಲಿನ ಸಕಾರಾತ್ಮಕ ಊರ್ಜೆ ಹೆಚ್ಚಾಯಿತು.

೩. ಆಧ್ಯಾತ್ಮಿಕ ತೊಂದರೆ ಇಲ್ಲದಿರುವ ಇಬ್ಬರೂ ಸಾಧಕಿಯರಲ್ಲಿ ನಕಾರಾತ್ಮಕ ಊರ್ಜೆ ಕಂಡುಬರಲಿಲ್ಲ. ಕುಂಕುಮವನ್ನು ಹಚ್ಚಿಕೊಂಡ ನಂತರ ಅವರಲ್ಲಿನ ಸಕಾರಾತ್ಮಕ ಊರ್ಜೆ ತುಂಬಾ ಹೆಚ್ಚಾಯಿತು.

ಸೌ. ಮಧುರಾ ಕರ್ವೆ

೨. ನಿಷ್ಕರ್ಷ

ಸ್ತ್ರೀಯರು ಹಣೆಯಲ್ಲಿ ಕುಂಕುಮವನ್ನು ಹಚ್ಚಿಕೊಳ್ಳುವುದರಿಂದ ಅವರಿಗೆ ಆಧ್ಯಾತ್ಮಿಕ ಸ್ತರದಲ್ಲಿ ಲಾಭವಾಗುತ್ತವೆ.

೩. ಪರೀಕ್ಷಣೆಯ ನಿರೀಕ್ಷಣೆಗಳಾಧ್ಯಾತ್ಮ ಶಾಸ್ತ್ರೀಯ ವಿಶ್ಲೇಷಣೆ

೩ ಅ. ಸ್ತ್ರೀಯರು ಹಣೆಯಲ್ಲಿ ಕುಂಕುಮವನ್ನು ಹಚ್ಚಿಕೊಳ್ಳುವುದರಿಂದ ಅವರ ಸುತ್ತಲೂ ಸಂರಕ್ಷಣಾ-ಕವಚವು ನಿರ್ಮಾಣವಾಗಿ ಕೆಟ್ಟ ಶಕ್ತಿಗಳಿಂದ ಅವರ ರಕ್ಷಣೆಯಾಗುವುದು : ಕುಂಕುಮದಿಂದ ಪ್ರಕ್ಷೇಪಿಸುವ ತಾರಕ-ಮಾರಕ ಚೈತನ್ಯದಿಂದ ಕೆಟ್ಟ ಶಕ್ತಿಗಳಿಗೆ ಸ್ತ್ರೀಯರ ಆಜ್ಞಾಚಕ್ರದಿಂದ ಶರೀರದಲ್ಲಿ ಪ್ರವೇಶಿಸಲು ಅಡಚಣೆ ಉಂಟಾಗುತ್ತದೆ. ಕುಂಕುಮದಿಂದ ಸ್ತ್ರೀಯರ ಸುತ್ತಲೂ ಚೈತನ್ಯದ ಕವಚ ನಿರ್ಮಾಣವಾಗುವುದರಿಂದ ಕೆಟ್ಟ ಶಕ್ತಿಗಳಿಂದ ಅವರ ರಕ್ಷಣೆಯಾಗುತ್ತದೆ.

೩ ಆ. ಕುಂಕುಮದ ಚೈತನ್ಯದಿಂದ ಆಧ್ಯಾತ್ಮಿಕ ತೊಂದರೆಯಿರುವ ಸಾಧಕಿಯರಲ್ಲಿನ ನಕಾರಾತ್ಮಕ ಊರ್ಜೆ ಕಡಿಮೆ ಅಥವಾ ಇಲ್ಲವಾಗಿ ಅವರಲ್ಲಿನ ಸಕಾರಾತ್ಮಕ ಊರ್ಜೆಯಲ್ಲಿ ಹೆಚ್ಚಳವಾಗುವುದು : ಈ ಇಬ್ಬರೂ ಸಾಧಕಿಯರು ಹಣೆಗೆ ಕುಂಕುಮವನ್ನು ಹಚ್ಚಿಕೊಂಡಿದ್ದರಿಂದ ಅವರಿಗೆ ಚೈತನ್ಯ ಸಿಕ್ಕಿತು. ಇದರಿಂದ ಅವರ ಸುತ್ತಲಿನ ತೊಂದರೆದಾಯಕ ಸ್ಪಂದನಗಳ ಆವರಣ ಕಡಿಮೆ ಅಥವಾ ಇಲ್ಲವಾಗಿ  ಅವರಲ್ಲಿನ ಸಾತ್ತ್ವಿಕತೆ ಹೆಚ್ಚಾಯಿತು.

೩ ಇ. ಕುಂಕುಮದ ಚೈತನ್ಯದಿಂದ ಆಧ್ಯಾತ್ಮಿಕ ತೊಂದರೆಯಿಲ್ಲದಿರುವ ಸಾಧಕಿಯರಲ್ಲಿನ ಸಕಾರಾತ್ಮಕ ಊರ್ಜೆಯಲ್ಲಿ ತುಂಬಾ ಹೆಚ್ಚಳವಾಗುವುದು : ಈ ಇಬ್ಬರೂ ಸಾಧಕಿಯರು ಹಣೆಯಲ್ಲಿ ಕುಂಕುಮವನ್ನು ಹಚ್ಚಿಕೊಂಡಿದ್ದರಿಂದ ಅವರಿಗೆ ಚೈತನ್ಯ ಸಿಕ್ಕಿತು. ಇದರಿಂದ ಅವರ ಸಾತ್ತ್ವಿಕತೆ ತುಂಬಾ ಹೆಚ್ಚಾಯಿತು.

ಸ್ತ್ರೀಯರು ಹಣೆಗೆ ಕುಂಕುಮವನ್ನು ಹಚ್ಚಿಕೊಳ್ಳುವುದರಿಂದ ಅವರಿಗೆ ಆಧ್ಯಾತ್ಮಿಕ ಸ್ತರದಲ್ಲಿ ಲಾಭಗಳಾಗುತ್ತವೆ, ಎಂಬುದು ಇದರಿಂದ ಸಿದ್ಧವಾಯಿತು.’

– ಸೌ. ಮಧುರಾ ಧನಂಜಯ ಕರ್ವೆ, ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ, ಗೋವಾ. (೨೭.೧೨.೨೦೨೨)

ವಿ-ಅಂಚೆ : [email protected]

ಕೆಟ್ಟ ಶಕ್ತಿ : ವಾತಾವರಣದಲ್ಲಿ ಉತ್ತಮ ಹಾಗೂ ಕೆಟ್ಟ ಎರಡೂ ಶಕ್ತಿಗಳು ಕಾರ್ಯನಿರತವಾಗಿರುತ್ತವೆ. ಒಳ್ಳೆಯ ಶಕ್ತಿ ಒಳ್ಳೆಯ ಕಾರ್ಯಕ್ಕಾಗಿ ಮಾನವನಿಗೆ ಸಹಾಯ ಮಾಡುತ್ತವೆ ಹಾಗೂ ಕೆಟ್ಟ ಶಕ್ತಿಗಳು ಅವನಿಗೆ ತೊಂದರೆ ಕೊಡುತ್ತವೆ. ಹಿಂದಿನ ಕಾಲದಲ್ಲಿ ಋಷಿಮುನಿಗಳ ಯಜ್ಞಗಳಲ್ಲಿ ರಾಕ್ಷಸರು ವಿಘ್ನಗಳನ್ನು ತಂದಿರುವ ಅನೇಕ ಕಥೆಗಳು ವೇದ-ಪುರಾಣಗಳಲ್ಲಿ ಇರುತ್ತವೆ. ‘ಅಥರ್ವವೇದ’ದಲ್ಲಿ ಅನೇಕ ಕಡೆಗಳಲ್ಲಿ ಕೆಟ್ಟ ಶಕ್ತಿ, ಉದಾ. ಅಸುರರು, ರಾಕ್ಷಸರು, ಪಿಶಾಚಿ, ಇವರ ಪ್ರತಿಬಂಧದ ಮಂತ್ರಗಳನ್ನು ಹೇಳಲಾಗಿದೆ. ಕೆಟ್ಟ ಶಕ್ತಿಗಳ ತೊಂದರೆಯ ನಿವಾರಣೆಗಾಗಿ ವಿವಿಧ ಆಧ್ಯಾತ್ಮಿಕ ಉಪಾಯಗಳನ್ನು ವೇದ ಮತ್ತು ಧರ್ಮಗ್ರಂಥಗಳಲ್ಲಿ ಹೇಳಲಾಗಿದೆ.

ಆಧ್ಯಾತ್ಮಿಕ ತೊಂದರೆ : ಇದರರ್ಥ ವ್ಯಕ್ತಿಯಲ್ಲಿ ನಕಾರಾತ್ಮಕ ಸ್ಪಂದನಗಳಿರುವುದು. ವ್ಯಕ್ತಿಯಲ್ಲಿ ನಕಾರಾತ್ಮಕ ಸ್ಪಂದನಗಳು ಶೇ. ೫೦ ರಷ್ಟು ಅಥವಾ ಅದಕ್ಕಿಂತ ಹೆಚ್ಚು ಪ್ರಮಾಣದಲ್ಲಿರುವುದು ಎಂದರೆ ತೀವ್ರ ತೊಂದರೆ, ನಕಾರಾತ್ಮಕ ಸ್ಪಂದನಗಳು ಶೇ. ೩೦ ರಿಂದ ಶೇ ೪೯ ರಷ್ಟು ಇರುವುದು ಎಂದರೆ ಮಧ್ಯಮ ತೊಂದರೆ, ಶೇ. ೩೦ ಕ್ಕಿಂತ ಕಡಿಮೆಯಿರುವುದು ಅಂದರೆ ಮಂದ ಆಧ್ಯಾತ್ಮಿಕ ತೊಂದರೆ ಇರುವುದಾಗಿದೆ. ಆಧ್ಯಾತ್ಮಿಕ ತೊಂದರೆಯು ಪ್ರಾರಬ್ಧ, ಪೂರ್ವಜರ ತೊಂದರೆ ಇತ್ಯಾದಿ ಆಧ್ಯಾತ್ಮಿಕ ಸ್ತರದ ಕಾರಣಗಳಿಂದ ಆಗುತ್ತದೆ. ಆಧ್ಯಾತ್ಮಿಕ ತೊಂದರೆಗಳನ್ನು ಸಂತರು ಅಥವಾ ಸೂಕ್ಷ್ಮ ಸ್ಪಂದನಗಳನ್ನು ಅರಿಯುವ ಸಾಧಕರು ಕಂಡು ಹಿಡಿಯಬಲ್ಲರು