ದೇವಸ್ಥಾನದಲ್ಲಿ ಪ್ರದಕ್ಷಿಣೆಗಳನ್ನು ಹಾಕುವುದರಿಂದ ವ್ಯಕ್ತಿಗಾಗುವ ಆಧ್ಯಾತ್ಮಿಕ ಲಾಭಗಳು

‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ ‘ಯು.ಎ.ಎಸ್. (ಯುನಿವರ್ಸಲ್‌ ಔರಾ ಸ್ಕ್ಯಾನರ್‌)’ ಉಪಕರಣದಿಂದ ಮಾಡಿದ ವೈಜ್ಞಾನಿಕ ಪರೀಕ್ಷಣೆ

‘ದೇವಸ್ಥಾನದಲ್ಲಿ ದೇವರ ದರ್ಶನವನ್ನು ಪಡೆದ ನಂತರ ನಾವು ದೇವರಿಗೆ ಪ್ರದಕ್ಷಿಣೆಗಳನ್ನು ಹಾಕುತ್ತೇವೆ. ಪ್ರದಕ್ಷಿಣೆ ಗಳನ್ನು ಹಾಕುವುದರಿಂದ ನಮಗೆ ಚೈತನ್ಯ ಸಿಗುತ್ತದೆ. ‘ದೇವ ಸ್ಥಾನದಲ್ಲಿ ಪ್ರದಕ್ಷಿಣೆಗಳನ್ನು ಹಾಕುವುದರಿಂದ ವ್ಯಕ್ತಿಯ ಸೂಕ್ಷ್ಮ-ಊರ್ಜೆಯ ಮೇಲೆ ಯಾವ ಪರಿಣಾಮವಾಗುತ್ತದೆ ?’, ಎಂಬುದನ್ನು ವಿಜ್ಞಾನದ ಮೂಲಕ ಅಧ್ಯಯನ ಮಾಡಲು ಪ್ರದಕ್ಷಿಣೆಗಳನ್ನು ಹಾಕುವ ಮೊದಲು ಮತ್ತು ಪ್ರದಕ್ಷಿಣೆಗಳನ್ನು ಹಾಕಿದ ನಂತರ ಆಧ್ಯಾತ್ಮಿಕ ತೊಂದರೆ ಇರುವ ಮತ್ತು ಆಧ್ಯಾತ್ಮಿಕ ತೊಂದರೆ ಇಲ್ಲದಿರುವ ಸಾಧಕರ ‘ಯು.ಎ.ಎಸ್.  ಉಪಕರಣದಿಂದ ಪರೀಕ್ಷಣೆಯನ್ನು ಮಾಡಲಾಯಿತು. ಈ ಪರೀಕ್ಷಣೆಯ ನಿರೀಕ್ಷಣೆಗಳ ವಿವೇಚನೆ ಮತ್ತು ಅಧ್ಯಾತ್ಮಶಾಸ್ತ್ರೀಯ ವಿಶ್ಲೇಷಣೆಯನ್ನು ಮುಂದೆ ಕೊಡಲಾಗಿದೆ.

ಯು.ಎ.ಎಸ್. ಉಪಕರಣದ ಮೂಲಕ ಪರೀಕ್ಷಣೆ ಮಾಡುತ್ತಿರುವ ಶ್ರೀ. ಆಶಿಷ್ ಸಾವಂತ್

೧. ಪರೀಕ್ಷಣೆಯಲ್ಲಿನ ನಿರೀಕ್ಷಣೆಗಳ ವಿವೇಚನೆ

ಈ ಪರೀಕ್ಷಣೆಯಲ್ಲಿ ಆಧ್ಯಾತ್ಮಿಕತೊಂದರೆ ಇರುವ ಮತ್ತು ಆಧ್ಯಾತ್ಮಿಕ ತೊಂದರೆ ಇಲ್ಲದಿರುವಸಾಧಕರು ಒಂದು ಗಣಪತಿಯ ದೇವಸ್ಥಾನದ ಮೂರ್ತಿಯ ದರ್ಶನ ಪಡೆದು ಪ್ರದಕ್ಷಿಣೆ ಹಾಕಿದರು.

ಸೌ. ಮಧುರಾ ಕರ್ವೆ

೧ ಅ. ದೇವಸ್ಥಾನದಲ್ಲಿ ಪ್ರದಕ್ಷಿಣೆಗಳನ್ನು ಹಾಕಿದ ನಂತರ ಆಧ್ಯಾತ್ಮಿಕ ತೊಂದರೆ ಇರುವ ಮತ್ತು ಇಲ್ಲದಿರುವ ಸಾಧಕರಲ್ಲಿನ ನಕಾರಾತ್ಮಕ ಊರ್ಜೆಯು ಬಹಳಷ್ಟು ಪ್ರಮಾಣದಲ್ಲಿ ಕಡಿಮೆಯಾಗಿ ಅವರಲ್ಲಿನ ಸಕಾರಾತ್ಮಕ ಊರ್ಜೆಯಲ್ಲಿ ಬಹಳ ಹೆಚ್ಚಳವಾಗುವುದು : ದೇವಸ್ಥಾನದಲ್ಲಿ ಪ್ರದಕ್ಷಿಣೆಗಳನ್ನು ಹಾಕುವ ಮೊದಲು ಆಧ್ಯಾತ್ಮಿಕ ತೊಂದರೆ ಇರುವ ಮತ್ತು ಆಧ್ಯಾತ್ಮಿಕ ತೊಂದರೆ ಇಲ್ಲದಿರುವ ಸಾಧಕರಲ್ಲಿ ನಕಾರಾತ್ಮಕ ಮತ್ತು ಸಕಾರಾತ್ಮಕ ಊರ್ಜೆಗಳಿದ್ದವು. ಅವರು ಪ್ರದಕ್ಷಿಣೆಗಳನ್ನು ಹಾಕಿದ ನಂತರ ಅವರಲ್ಲಿನ ನಕಾರಾತ್ಮಕ ಊರ್ಜೆಯು ಬಹಳಷ್ಟು ಪ್ರಮಾಣದಲ್ಲಿ ಕಡಿಮೆ ಅಥವಾ ಇಲ್ಲವಾಗಿ ಅವರಲ್ಲಿನ ಸಕಾರಾತ್ಮಕ ಊರ್ಜೆಯಲ್ಲಿ ಬಹಳ ಹೆಚ್ಚಳವಾಯಿತು. ಇದು ಮುಂದೆ ನೀಡಿದ ಕೋಷ್ಟಕದಿಂದ ಗಮನಕ್ಕೆ ಬರುತ್ತದೆ.

೨. ಪರೀಕ್ಷಣೆಯ ನಿರೀಕ್ಷಣೆಗಳ ಅಧ್ಯಾತ್ಮಶಾಸ್ತ್ರೀಯ ವಿಶ್ಲೇಷಣೆ

೨ ಅ. ಪ್ರದಕ್ಷಿಣೆಗಳನ್ನು ಹಾಕಿದುದರಿಂದ ಆಧ್ಯಾತ್ಮಿಕ ತೊಂದರೆ ಇರುವ ಮತ್ತು ಆಧ್ಯಾತ್ಮಿಕ ತೊಂದರೆ ಇಲ್ಲದಿರುವ ಸಾಧಕರಿಗೆ ಆಧ್ಯಾತ್ಮಿಕ ಸ್ತರದಲ್ಲಿ ಲಾಭವಾಗುವುದು : ದೇವಸ್ಥಾನದ ಗರ್ಭಗುಡಿಯಲ್ಲಿರುವ ಚೈತನ್ಯ ಗರ್ಭಗುಡಿಯಲ್ಲಿ ಮತ್ತು ಗರ್ಭಗುಡಿಯ ಸುತ್ತಲೂ ವರ್ತುಲಾಕಾರದಲ್ಲಿ ಸುತ್ತುತ್ತಿರುತ್ತದೆ. ಪ್ರದಕ್ಷಿಣೆಗಳನ್ನು ಹಾಕಿದ ನಂತರ ಪ್ರದಕ್ಷಿಣೆಗಳನ್ನು ಹಾಕುವವರಿಗೆ ಈ ಚೈತನ್ಯದ ಲಾಭವಾಗುತ್ತದೆ. ಪರೀಕ್ಷಣೆಯಲ್ಲಿ ಆಧ್ಯಾತ್ಮಿಕ ತೊಂದರೆ ಇರುವ ಮತ್ತು ಇಲ್ಲದಿರುವ ಸಾಧಕರು ಈ ಚೈತನ್ಯವನ್ನು ತಮ್ಮ ತಮ್ಮ ಭಾವಕ್ಕನುಸಾರ ಗ್ರಹಣ ಮಾಡಿದರು. ಇದರಿಂದ ಅವರ ಮೇಲಿನ ತೊಂದರೆದಾಯಕ ಸ್ಪಂದನಗಳ ಆವರಣ ಬಹಳಷ್ಟು ಪ್ರಮಾಣದಲ್ಲಿ ಕಡಿಮೆಯಾಗಿ ಅವರಲ್ಲಿನ ಸಾತ್ತ್ವಿಕತೆ ಬಹಳಷ್ಟು ಪ್ರಮಾಣದಲ್ಲಿ ಹೆಚ್ಚಾಯಿತು. ಇದರಿಂದ ‘ಪ್ರದಕ್ಷಿಣೆಗಳನ್ನು ಹಾಕುವುದರಿಂದ ವ್ಯಕ್ತಿಗೆ ಆಧ್ಯಾತ್ಮಿಕ ಸ್ತರದಲ್ಲಿ ಲಾಭವಾಗುತ್ತದೆ’, ಎಂಬುದು ಗಮನಕ್ಕೆ ಬರುತ್ತದೆ.’

– ಸೌ. ಮಧುರಾ ಧನಂಜಯ ಕರ್ವೆ, ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ, ಗೋವಾ. (೨೦.೧೨.೨೦೨೨)

ವಿ-ಅಂಚೆ : [email protected]

* ಆಧ್ಯಾತ್ಮಿಕ ತೊಂದರೆ : ಇದರರ್ಥ ವ್ಯಕ್ತಿಯಲ್ಲಿ ನಕಾರಾತ್ಮಕ ಸ್ಪಂದನಗಳಿರುವುದು. ವ್ಯಕ್ತಿಯಲ್ಲಿ ನಕಾರಾತ್ಮಕ ಸ್ಪಂದನಗಳು ಶೇ. ೫೦ ರಷ್ಟು ಅಥವಾ ಅದಕ್ಕಿಂತ ಹೆಚ್ಚು ಪ್ರಮಾಣದಲ್ಲಿರುವುದು ಎಂದರೆ ತೀವ್ರ ತೊಂದರೆ, ನಕಾರಾತ್ಮಕ ಸ್ಪಂದನಗಳು ಶೇ. ೩೦ ರಿಂದ ಶೇ ೪೯ ರಷ್ಟು ಇರುವುದು ಎಂದರೆ ಮಧ್ಯಮ ತೊಂದರೆ, ಶೇ. ೩೦ ಕ್ಕಿಂತ ಕಡಿಮೆಯಿರುವುದು ಅಂದರೆ ಮಂದ ಆಧ್ಯಾತ್ಮಿಕ ತೊಂದರೆ ಇರುವುದಾಗಿದೆ. ಆಧ್ಯಾತ್ಮಿಕ ತೊಂದರೆಯು ಪ್ರಾರಬ್ಧ, ಪೂರ್ವಜರ ತೊಂದರೆ ಇತ್ಯಾದಿ ಆಧ್ಯಾತ್ಮಿಕ ಸ್ತರದ ಕಾರಣಗಳಿಂದ ಆಗುತ್ತದೆ. ಆಧ್ಯಾತ್ಮಿಕ ತೊಂದರೆಗಳನ್ನು ಸಂತರು ಅಥವಾ ಸೂಕ್ಷ್ಮ ಸ್ಪಂದನಗಳನ್ನು ಅರಿಯುವ ಸಾಧಕರು ಕಂಡು ಹಿಡಿಯಬಲ್ಲರು.