ತ್ರಿದಲಂ ತ್ರಿಗುಣಾಕಾರಂ ತ್ರಿನೇತ್ರಂ ಚ ತ್ರಯಾಯುಧಮ್ | ತ್ರಿಜನ್ಮಪಾಪಸಂಹಾರಂ ಏಕಬಿಲ್ವಂ ಶಿವಾರ್ಪಣಮ್ || – ಬಿಲ್ವಾಷ್ಟಕ, ಶ್ಲೋಕ ೧
ಅರ್ಥ : ಮೂರು ಎಲೆಗಳಿರುವ, ತ್ರಿಗುಣಗಳಂತಿರುವ, ಮೂರು ಕಣ್ಣುಗಳಂತಿರುವ, ಮೂರು ಆಯುಧಗಳಂತಿರುವ ಮತ್ತು ಮೂರು ಜನ್ಮಗಳ ಪಾಪಗಳನ್ನು ನಾಶ ಮಾಡುವ ಈ ಬಿಲ್ವಪತ್ರೆಯನ್ನು ನಾನು ಶಿವನಿಗೆ ಅರ್ಪಿಸುತ್ತೇನೆ.
ಶಿವನಿಗೆ ಬಿಲ್ವಪತ್ರೆ ಅರ್ಪಿಸುವ ಪದ್ಧತಿಯ ಶಾಸ್ತ್ರ
೧. ತಾರಕ ಅಥವಾ ಮಾರಕ ಉಪಾಸನೆಯ ಪದ್ಧತಿಗನುಸಾರ ಬಿಲ್ವವನ್ನು ಹೇಗೆ ಅರ್ಪಿಸಬೇಕು ?
ಬಿಲ್ವದ ಎಲೆಗಳು ಶಿವತತ್ತ್ವದಲ್ಲಿನ ತಾರಕಶಕ್ತಿಯ ವಾಹಕ ಮತ್ತು ಬಿಲ್ವದ ಎಲೆಗಳ ತೊಟ್ಟು ಶಿವತತ್ತ್ವದಲ್ಲಿನ ಮಾರಕ ಶಕ್ತಿಯ ವಾಹಕವಾಗಿದೆ.
೧ ಅ. ಶಿವನ ತಾರಕ ರೂಪದ ಉಪಾಸನೆಯನ್ನು ಮಾಡುವವರು : ಸಾಮಾನ್ಯ ಉಪಾಸಕರ ಪ್ರಕೃತಿಯು ತಾರಕವಾಗಿರುವುದರಿಂದ ಶಿವನ ತಾರಕ ಉಪಾಸನೆಯು ಅವರ ಪ್ರಕೃತಿಗೆ ಹೊಂದುವಂತಹ ಮತ್ತು ಅವರ ಆಧ್ಯಾತ್ಮಿಕ ಉನ್ನತಿಗೆ ಪೂರಕವಾಗಿರುತ್ತದೆ. ಇಂತಹವರು ಶಿವನ ತಾರಕ ತತ್ತ್ವದ ಲಾಭವನ್ನು ಪಡೆದುಕೊಳ್ಳಲು ತೊಟ್ಟನ್ನು ಲಿಂಗದ ಕಡೆಗೆ ಮತ್ತು ಎಲೆಗಳ ತುದಿಗಳನ್ನು ನಮ್ಮೆಡೆಗೆ ಮಾಡಿ ಬಿಲ್ವಪತ್ರೆಯನ್ನು ಅರ್ಪಿಸಬೇಕು. (ಬಿಲ್ವಂ ತು ನ್ಯುಬ್ಜಂ ಸ್ವಾಭಿಮುಖಾಗ್ರಂ ಚ |)
೧ ಆ. ಶಿವನ ಮಾರಕ ರೂಪದ ಉಪಾಸನೆಯನ್ನು ಮಾಡುವವರು : ಶಾಕ್ತಪಂಥೀಯರು ಶಿವನ ಮಾರಕ ರೂಪದ ಉಪಾಸನೆ ಮಾಡುತ್ತಾರೆ. ಇಂತಹವರು ಶಿವನ ಮಾರಕ ತತ್ತ್ವದ ಲಾಭ ಪಡೆಯಲು ತೊಟ್ಟನ್ನು ನಮ್ಮ ಕಡೆಗೆ ಮತ್ತು ಎಲೆಗಳ ತುದಿಗಳನ್ನು ಶಿವನೆಡೆಗೆ ಮಾಡಿ ಬಿಲ್ವಪತ್ರೆಯನ್ನು ಅರ್ಪಿಸಬೇಕು.
ಬಿಲ್ವಪತ್ರೆಯನ್ನು ಕೆಳಮುಖವಾಗಿ ಏಕೆ ಅರ್ಪಿಸಬೇಕು ?
ಬಿಲ್ವಪತ್ರೆಯನ್ನು ಶಿವಲಿಂಗದ ಮೇಲೆ ಕೆಳಮುಖವಾಗಿ ಅರ್ಪಿಸಿದರೆ ಅದರಿಂದ ನಿರ್ಗುಣ ಸ್ತರದಲ್ಲಿನ ಸ್ಪಂದನಗಳು ಹೆಚ್ಚಿನ ಪ್ರಮಾಣದಲ್ಲಿ ಪ್ರಕ್ಷೇಪಿತವಾಗಿ ಭಕ್ತರಿಗೆ ಹೆಚ್ಚು ಲಾಭವಾಗುತ್ತದೆ. ಶಿವನಿಗೆ ತಾಜಾ ಬಿಲ್ವಪತ್ರೆ ಸಿಗದಿದ್ದರೆ ಹಿಂದಿನದಿನ ತೆಗೆದಿಟ್ಟ ಬಿಲ್ವಪತ್ರೆ ನಡೆಯುತ್ತದೆ, ಆದರೆ ಸೋಮವಾರದ ಬಿಲ್ವಪತ್ರೆ ಮರುದಿನ ನಡೆಯುವುದಿಲ್ಲ. (ಆಧಾರ – ಸನಾತನದ ಗ್ರಂಥ ‘ಶಿವ)