‘ರಾಮಸೇತು’ ವನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸುವಂತೆ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆಯ ಪಟ್ಟಿಯಲ್ಲಿ ಸೇರಿಸಿಕೊಳ್ಳಲು ಸರ್ವೋಚ್ಚ ನ್ಯಾಯಾಲಯದಿಂದ ಒಪ್ಪಿಗೆ

ನವ ದೆಹಲಿ – ಭಾಜಪ ಮುಖಂಡ ಡಾ. ಸುಬ್ರಹ್ಮಣ್ಯಂ ಸ್ವಾಮಿಯವರ `ರಾಮಸೇತು’ ವನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಲು ಕೇಂದ್ರಸರಕಾರಕ್ಕೆ ನಿರ್ದೇಶನ ನೀಡಬೇಕು’, ಎಂದು ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯ ಪಟ್ಟಿಯಲ್ಲಿ ಸೇರಿಸಲು ಸರ್ವೋಚ್ಚ ನ್ಯಾಯಾಲಯವು ಒಪ್ಪಿಗೆ ನೀಡಿದೆ. ‘ಸಂವಿಧಾನದ ಎದುರಿಗೆ ಅರ್ಜಿಗಳ ಆಲಿಕೆಗಳು ಪೂರ್ಣವಾದ ಬಳಿಕ ನಾವು ಈ ದೂರನ್ನು ಪಟ್ಟಿಯಲ್ಲಿ ಸೇರಿಸುತ್ತೇವೆ’ ಎಂದು ನ್ಯಾಯಾಲಯ ಹೇಳಿದೆ. `ಈ ಅಂಶಗಳ ಮೇಲೆ ಇಲ್ಲಿಯವರೆಗೆ ಯಾವುದೇ ನಿರ್ಣಯ ತೆಗೆದು ಕೊಂಡಿರುವುದಿಲ್ಲ, ಈಗ ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಆಲಿಕೆಗೆ ತೆಗೆದುಕೊಳ್ಳಬೇಕು’ ಎಂದು ಡಾ. ಸುಬ್ರಹ್ಮಣ್ಯ ಸ್ವಾಮಿಯವರು ಯುಕ್ತಿವಾದ ಮಂಡಿಸಿದ್ದರು.