ವಿಶೇಷ ಸಮಿತಿಯ ಶಿಫಾರಸ್ಸಿನ ಅನುಸಾರ ರಾಷ್ಟ್ರಪತಿಯ ಮೂಲಕ ಮುಖ್ಯ ಚುನಾವಣಾ ಆಯುಕ್ತರ ನೇಮಕಾತಿಯಾಗಲಿದೆ !

ಸರ್ವೋಚ್ಚ ನ್ಯಾಯಾಲಯದ ನಿರ್ಣಯ

ನವದೆಹಲಿ- ಮುಖ್ಯ ಚುನಾವಣಾ ಆಯುಕ್ತ ಮತ್ತು ಇತರೆ ಚುನಾವಣಾ ಆಯುಕ್ತರ ನೇಮಕಾತಿಯನ್ನು ಪ್ರಧಾನಮಂತ್ರಿ, ವಿರೋಧಪಕ್ಷದ ಮುಖಂಡರು ಮತ್ತು ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರು ಇವರ ಸಂಯುಕ್ತ ಸಮಿತಿಯ ಶಿಫಾರಸ್ಸಿನ ಅನುಸಾರ ರಾಷ್ಟ್ರಪತಿಯವರು ನೇಮಕ ಮಾಡಬೇಕು, ಎಂದು ಸರ್ವೋಚ್ಚ ನ್ಯಾಯಾಲಯ ಹೇಳಿದೆ. ಹಾಗೆಯೇ ‘ವಿರೋಧಿ ಪಕ್ಷದ ಮುಖಂಡರು ಇಲ್ಲದಿದ್ದರೆ, ಆಗ ಸಂಸತ್ತಿನ ಅತ್ಯಧಿಕ ದೊಡ್ಡ ವಿರೋಧಿ ಪಕ್ಷದ ನಾಯಕರು ಈ ಸಮಿತಿಯ ಸದಸ್ಯರಾಗಿರುತ್ತಾರೆ’, ಎಂದೂ ಸಹ ನ್ಯಾಯಾಲಯ ಸ್ಪಷ್ಟಪಡಿಸಿದೆ. ಈ ಪ್ರಕರಣದಲ್ಲಿ ದಾಖಲಿಸಲಾಗಿರುವ ಅರ್ಜಿಯ ಕುರಿತು ಯುಕ್ತಿವಾದ ನಡೆದ ಬಳಿಕ ತೀರ್ಪು ಕಾಯ್ದಿರಿಸಲಾಗಿತ್ತು.