ಶಿಕ್ಷಣ ಸಚಿವ ಬಿ.ಎಸ್ .ನಾಗೇಶ ಇವರ ಸ್ಪಷ್ಟನೆ !
(ಹಿಜಾಬ್ – ಮುಸಲ್ಮಾನ ಮಹಿಳೆಯರ ತಲೆ ಮತ್ತು ಕುತ್ತಿಗೆಯನ್ನು ಮುಚ್ಚಿಕೊಳ್ಳುವ ವಸ್ತ್ರ)
ಬೆಂಗಳೂರು ( ಕರ್ನಾಟಕ) – ೧೨ ನೇ ತರಗತಿಯ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಪರೀಕ್ಷೆಗೆ ಬಂದರೆ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ನೀಡಲಾಗುವುದಿಲ್ಲ, ಸಮವಸ್ತ್ರ ಧರಿಸಿಯೇ ಪರೀಕ್ಷೆಗೆ ಬರಬೇಕು ಎಂಬುದನ್ನು ಸ್ಪಷ್ಟಪಡಿಸಲಾಗಿದೆ ಮತ್ತು ಹಿಜಾಬ್ ಇದು ಸಮವಸ್ತ್ರದ ಭಾಗ ಅಲ್ಲ, ಎಂದು ಪತ್ರಕರ್ತರ ಜೊತೆ ಮಾತನಾಡುವಾಗ ಕರ್ನಾಟಕದ ಶಿಕ್ಷಣ ಸಚಿವ ಬಿ.ಎಸ್. ನಾಗೇಶ ಅವರು ಸ್ಪಷ್ಟಪಡಿಸಿದರು. ಪರೀಕ್ಷೆ ಬರೆಯಲು ಹಿಜಾಬ್ ಧರಿಸಿ ಬರಲು ಅನುಮತಿ ಕೋರಿ ಒಬ್ಬ ಮಹಿಳಾ ನ್ಯಾಯವಾದಿ ಸರ್ವೋಚ್ಚ ನ್ಯಾಯಾಲಯದಲ್ಲಿ ಮನವಿ ದಾಖಲಿಸಿದ್ದರು. ಇದರ ಬಗ್ಗೆ ತುರ್ತು ವಿಚಾರಣೆ ನಡೆಸಲು ಒತ್ತಾಯಿಸಿರುವ ಅರ್ಜಿಯನ್ನು ನ್ಯಾಯಾಲಯವು ತಿರಸ್ಕರಿಸಿ ಹೋಳಿ ಹಬ್ಬದ ನಂತರ ವಿಚಾರಣೆ ನಡೆಸಲಾಗುವುದು ಎಂದು ಹೇಳಿದೆ. ಇದೇ ಮಾರ್ಚ್ ೯ ರಿಂದ ಪರೀಕ್ಷೆ ಆರಂಭವಾಗಲಿದೆ .