೧. ನೈಸರ್ಗಿಕ
ಜ್ಯೋತಿಷ್ಯಶಾಸ್ತ್ರಾನುಸಾರ ಪಾಡ್ಯದಸಮಯದಲ್ಲಿ ಸೂರ್ಯನು ವಸಂತ-ಸಂಪಾತದ ಮೇಲೆ ಬರುತ್ತಾನೆ (ಸಂಪಾತಬಿಂದು ಎಂದರೆ (ಮಕರ ಕ್ರಾಂತಿವೃತ್ತ ಮತ್ತು ವಿಷುವವೃತ್ತ (ಕರ್ಕಾಟಕ) ಈ ಎರಡು ವೃತ್ತಗಳು ಯಾವ ಬಿಂದುವಿನಲ್ಲಿ ಪರಸ್ಪರ ಭೇದಿಸುತ್ತವೆಯೋ ಆ ಬಿಂದು) ಮತ್ತು ವಸಂತಋತುವುಪ್ರಾರಂಭವಾಗುತ್ತದೆ. ಎಲ್ಲ ಋತುಗಳಲ್ಲಿ ‘ಕುಸುಮಾಕರಿವಸಂತ ಋತುವು ನನ್ನ ವಿಭೂತಿಯಾಗಿದೆ’ ಎಂದು ಭಗವಂತನು ಶ್ರೀಮದ್ಭಗವದ್ಗೀತೆಯಲ್ಲಿ (ಅಧ್ಯಾಯ ೧೦, ಶ್ಲೋಕ ೩೫) ಹೇಳಿದ್ದಾನೆ. ಈ ಸಮಯದಲ್ಲಿ ಸಮಶೀತೋಷ್ಣ, ಉತ್ಸಾಹವರ್ಧಕ ಮತ್ತು ಆಹ್ಲಾದದಾಯಕ ವಾತಾವರಣವಿರುತ್ತದೆ. ಶಿಶಿರ ಋತುವಿನಲ್ಲಿ ಗಿಡಮರಗಳ ಎಲೆಗಳು ಉದುರಿ ಹೋಗಿರುತ್ತವೆ ಮತ್ತು ಪಾಡ್ಯದ ಸಮಯದಲ್ಲಿ ಅವುಗಳಿಗೆ ಹೊಸ ಚಿಗುರು ಬರುತ್ತಿರುತ್ತವೆ. ಗಿಡಮರಗಳು ಚೆನ್ನಾಗಿ ಕಾಣುತ್ತವೆ.
೨. ಐತಿಹಾಸಿಕ
ಈ ದಿನದಂದು
ಅ. ರಾಮನು ವಾಲಿಯನ್ನು ವಧಿಸಿದನು.
ಆ. ಶಕರು ಹೂಣರನ್ನು ಸೋಲಿಸಿ ವಿಜಯವನ್ನು ಪಡೆದರು.
ಇ. ಈ ದಿನದಿಂದಲೇ ‘ಶಾಲಿವಾಹನಶಕೆ’ ಪ್ರಾರಂಭವಾಯಿತು; ಏಕೆಂದರೆ ಈ ದಿನ ಶಾಲಿವಾಹನನು ಶತ್ರುಗಳ ಮೇಲೆ ವಿಜಯವನ್ನು ಪಡೆದಿದ್ದನು.
೩. ಆಧ್ಯಾತ್ಮಿಕ
ಈ ದಿನವೇ ಬ್ರಹ್ಮದೇವನು ಸೃಷ್ಟಿಯನ್ನು ನಿರ್ಮಿಸಿದನು, ಅರ್ಥಾತ್ ಈ ದಿನ ಸತ್ಯಯುಗವು ಪ್ರಾರಂಭವಾಯಿತು.ಆದುದರಿಂದಲೇ ಈ ದಿನದಂದು ವರ್ಷಾರಂಭವನ್ನು ಮಾಡುತ್ತಾರೆ.