ಟಿಕೈತ್ ಕುಟುಂಬಕ್ಕೆ ಜೀವಬೆದರಿಕೆ ಹಾಕಿದ್ದ ವ್ಯಕ್ತಿಯ ಬಂಧನ

ನವ ದೆಹಲಿ : ಭಾರತೀಯ ಕಿಸಾನ್ ಯೂನಿಯನ್‌ನ ರಾಷ್ಟ್ರೀಯ ಅಧ್ಯಕ್ಷ ರಾಕೇಶ ಟಿಕೈತ್ ಮತ್ತು ಅವರ ಕುಟುಂಬವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ದೆಹಲಿಯ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿಶಾಲ‌ ಎಂಬವನು ದೆಹಲಿಯ ನಜಾಫಗಡ್ ನಿವಾಸಿಯಾಗಿದ್ದಾನೆ.

ಪೊಲೀಸರ ತನಿಖೆಯಲ್ಲಿ ವಿಶಾಲನು, ಆತ ಟಿಕರಿ ಗಡಿಯಲ್ಲಿ ರೈತರ ಆಂದೋಲನದಲ್ಲಿ ಭಾಗವಹಿಸಿದ್ದೆ. ಈ ಪ್ರಕರಣದಲ್ಲಿ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಸರಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳ ವಿರುದ್ಧ ಟಿಕೈತ್ ಪ್ರತಿಭಟನೆ ನಡೆಸಿದ್ದರು. ಈ ಆಂದೋಲನದಲ್ಲಿ ಖಲಿಸ್ತಾನಿಯರು ಭಾಗವಹಿಸಿದ್ದರು ಎಂಬುದು ಬಹಿರಂಗವಾಗಿತ್ತು.