ಕರ್ಣಾವತಿಯಲ್ಲಿ ಭಾರತ-ಆಸ್ಟ್ರೇಲಿಯಾ ಟೆಸ್ಟ್ ಪಂದ್ಯದ ವೇಳೆ ಖಲಿಸ್ತಾನಿಯರಿಂದ ರಕ್ತಪಾತ ಮಾಡುವ ಬೆದರಿಕೆ !

ಮಧ್ಯಪ್ರದೇಶದಿಂದ 2 ವ್ಯಕ್ತಿಗಳ ಬಂಧನ

ಕರ್ಣಾವತಿ (ಗುಜರಾತ್) – ಇಲ್ಲಿ ಸಧ್ಯ ಭಾರತ ಮತ್ತು ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ನಡುವಿನ 4 ನೇ ಟೆಸ್ಟ್ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ರಕ್ತಪಾತ ಮಾಡಲು ನಿಷೇಧಿತ ಖಲಿಸ್ತಾನಿ ಭಯೋತ್ಪಾದಕ ಸಂಘಟನೆ ‘ಸಿಖ್ಸ್ ಫಾರ್ ಜಸ್ಟಿಸ್’ ಮುಖ್ಯಸ್ಥ ಗುರುಪತ್ವಂತ್ ಸಿಂಗ್ ಹೆಸರಿನಲ್ಲಿ ಬೆದರಿಕೆ ಸಂದೇಶ ಹರಿದಾಡಿದೆ. ಈ ಹಿನ್ನೆಲೆಯಲ್ಲಿ ಇಲ್ಲಿನ ಕ್ರೀಡಾಂಗಣದ ಭದ್ರತೆಯನ್ನು ಹೆಚ್ಚಿಸಲಾಗಿದೆ. ಇದರೊಂದಿಗೆ ಕರ್ಣಾವತಿ ಪೊಲೀಸರು ಮಧ್ಯಪ್ರದೇಶದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ‘ಸಿಮ್ ಬಾಕ್ಸ್’ ತಂತ್ರಜ್ಞಾನ ಬಳಸಿ ಈ ಬೆದರಿಕೆಗಳನ್ನು ಹಾಕಲಾಗುತ್ತಿದೆ ಎನ್ನಲಾಗಿದೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಕರ್ಣಾವತಿಗೆ ಬಂದಾಗ ಈ ಬೆದರಿಕೆಗಳನ್ನು ಹಾಕಲಾಗಿತ್ತು.

ಸಂಪಾದಕೀಯ ನಿಲುವು

ಖಾಲಿಸ್ತಾನಿಗಳ ಹೆಚ್ಚುತ್ತಿರುವ ಚಳುವಳಿಯನ್ನು ಹತ್ತಿಕ್ಕುವುದು ಯಾವಾಗ ?