ಜ್ಞಾನವಾಪಿ ಪ್ರಕರಣದ ಎಲ್ಲಾ ಮೊಕದ್ದಮೆಗಳ ಕ್ರೋಢೀಕರಣದ ಕುರಿತು ಸುಪ್ರೀಂ ಕೋರ್ಟನಲ್ಲಿ ವಿಚಾರಣೆ !

ಸರ್ವೋಚ್ಚ ನ್ಯಾಯಾಲಯ

ನವದೆಹಲಿ – ವಾರಣಾಸಿಯಲ್ಲಿನ ಜ್ಞಾನವಾಪಿ ವಿವಾದಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಲ್ಲಾ ಪ್ರಕರಣಗಳನ್ನು ಕ್ರೋಢೀಕರಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಪಟ್ಟಿ ಮಾಡಲು ಸುಪ್ರೀಂ ಕೋರ್ಟ್ ತನ್ನ ಒಪ್ಪಿಗೆ ನೀಡಿದೆ. ಏಪ್ರಿಲ್ 21 ರಂದು ಇದರ ವಿಚಾರಣೆ ನಡೆಯಲಿದೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್, ನ್ಯಾಯಮೂರ್ತಿ ನರಸಿಂಹ ಮತ್ತು ನ್ಯಾಯಮೂರ್ತಿ ಪರಡಿವಾಲಾ ಅವರನ್ನೊಳಗೊಂಡ ಪೀಠದ ಮುಂದೆ ಹಿಂದೂ ಪಕ್ಷದ ಪರ ನ್ಯಾಯವಾದಿ ವಿಷ್ಣು ಶಂಕರ್ ಜೈನ್ ಅವರು ಈ ವಿಷಯವನ್ನು ಪ್ರಸ್ತಾಪಿಸಿದರು. ಜೈನ್ ಮೊದಲ ದಾವೆಯಲ್ಲಿ ಫಿರ್ಯಾದಿಗಳನ್ನು ಪ್ರತಿನಿಧಿಸುತ್ತಿದ್ದಾರೆ. ಈ ಅಂಶವು ಜ್ಞಾನವಾಪಿ ಮಸೀದಿಯ ಆವರಣದಲ್ಲಿ ಕಂಡುಬಂದ ‘ಶಿವಲಿಂಗ’ದ ದಾವೆಗೆ ಸಂಬಂಧಿಸಿದೆ. ಜೈನ್ ಇವರು, ವಾರಣಾಸಿ ನ್ಯಾಯಾಲಯವು ಈ ಪ್ರರಕರಣದ ಆಲಿಕೆಗೆ ಹಿಂಜರಿಯುತ್ತಿದೆ. ಆದ್ದರಿಂದ ಸುಪ್ರೀಂ ಕೋರ್ಟ್ ಈ ಬಗ್ಗೆ ತುರ್ತಾಗಿ ಪರಿಶೀಲಿಸಬೇಕು ಎಂದು ಹೇಳಿದರು. ನ್ಯಾಯಾಲಯವು ಅದರ ಬಗ್ಗೆ ಸಕಾರಾತ್ಮಕತೆಯನ್ನು ತೋರಿಸಿದೆ.