ಏರ್ ಇಂಡಿಯಾ ವಿಮಾನದಲ್ಲಿ ಸಿಬ್ಬಂದಿ ಮೇಲೆ ಪ್ರಯಾಣಿಕರಿಂದ ಹಲ್ಲೆ

ಲಂಡನ್‌ಗೆ ತೆರಳುತ್ತಿದ್ದ ವಿಮಾನ ದೆಹಲಿಯಲ್ಲಿ ಇಳಿಯಿತು !

ನವ ದೆಹಲಿ – ದೆಹಲಿಯಿಂದ ಲಂಡನ್‌ಗೆ ತೆರಳುತ್ತಿದ್ದ ‘ಎಐ-೧೧೧’ ವಿಮಾನದಲ್ಲಿ ಪ್ರಯಾಣಿಕನೊಬ್ಬ ಸಿಬ್ಬಂದಿಯೊಂದಿಗೆ ವಾದ ನಡೆಸಿದ್ದಾನೆ. ಪ್ರಯಾಣಿಕರು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. ಇದರಲ್ಲಿ ೨ ಸಿಬ್ಬಂದಿ ಗಾಯಗೊಂಡಿದ್ದಾರೆ. ಹಾಗಾಗಿ ವಿಮಾನವನ್ನು ದೆಹಲಿಯಲ್ಲಿ ಇಳಿಸಲಾಯಿತು. ಪ್ರಯಾಣಿಕರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ನಂತರ ಪೊಲೀಸರು ಆತನನ್ನು ಬಂಧಿಸಿದ್ದಾರೆ.