ಹಿಂದೂ ಜನಜಾಗೃತಿ ಸಮಿತಿಯಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಮನವಿ !
ಮಂಗಳೂರು : ಕರ್ನಾಟಕದಲ್ಲಿ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಹಿಂದೂಗಳ ಪರವಾಗಿ ಕಾನೂನು ಹೋರಾಟ ನಡೆಸುತ್ತಿದ್ದ ಹಿಂದುತ್ವನಿಷ್ಠ ನ್ಯಾಯವಾದಿ ಕೃಷ್ಣಮೂರ್ತಿಯವರ ಮೇಲೆ ಮೊನ್ನೆ ಬುಧವಾರ ರಾತ್ರಿ ಅಪರಿಚಿತರಿಂದ ಗುಂಡಿನ ದಾಳಿ ನಡೆಸಲಾಗಿದೆ. ನ್ಯಾಯವಾದಿ ಕೃಷ್ಣಮೂರ್ತಿ ಅವರು ವಿಶ್ವ ಹಿಂದೂ ಪರಿಷತ್ತಿನ ಸಭೆ ಮುಗಿಸಿ ತಮ್ಮ ಕಾರಿನಲ್ಲಿ ಚೆಟ್ಟಳ್ಳಿಯಿಂದ ಮಡಿಕೇರಿಗೆ ಹೊರಡುತ್ತಿದ್ದರು. ಈ ವೇಳೆ ಅವರ ಮೇಲೆ ದಾಳಿ ನಡೆದಿದೆ. ಈ ಹೇಡಿತನದ ದಾಳಿಯನ್ನು ಹಿಂದೂ ಜನಜಾಗೃತಿ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ. ದಾಳಿಯ ಹಿಂದೆ ಪಿ.ಎಫ್.ಐ ಅಥವಾ ನಕ್ಸಲ್‌ವಾದಿಗಳ ಕೈವಾಡವಿದೆಯೇ ಎಂದು ಪತ್ತೆ ಹಚ್ಚಬೇಕೆಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿಯಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶ್ರೀ ರವಿಕುಮಾರ್ ಎಮ್. ಆರ್. ಇವರಿಗೆ ಮನವಿಯನ್ನು ನೀಡಲಾಯಿತು.
⭕Track the mastermind behind the shootout on Advocate Krishnamurthy representing devout Hindus in Gauri Lankesh case! – Memorandum to State Director General Of Police, by Hindu organisations and @HinduJagrutiOrg through the District Collector Mangaluru #Hindu_Advocate_Attacked pic.twitter.com/ObcQHn4gBb
— HJS Karnataka (@HJSKarnataka) April 16, 2023