ಜನರ ಜೀವಕ್ಕೆ ಅಪಾಯವಿರುವಾಗ ರಾಜಕೀಯ ಮಾಡಬೇಡಿ !

ಸುಡಾನ್ ಪ್ರಕರಣದಲ್ಲಿ ವಿದೇಶಾಂಗ ಸಚಿವ ಎಸ್. ಜೈಶಂಕರ್ ಇವರು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯಗೆ ಛೀಮಾರಿ !

ಎಸ್. ಜೈಶಂಕರ್

ನವ ದೆಹಲಿ – ಸುಡಾನ್‌ನಲ್ಲಿರುವ ಭಾರತೀಯರ ಜೀವ ಅಪಾಯದಲ್ಲಿದೆ. ಇಂತಹ ಪರಿಸ್ಥಿತಿಯಲ್ಲಿ ರಾಜಕೀಯ ಮಾಡಬೇಡಿ. ಭಾರತ ಸರಕಾರವು ಸುಡಾನ್ ನಲ್ಲಿ ಪರಿಸ್ಥಿತಿಯ ಬಗ್ಗೆ ನಿಗಾವಹಿಸಿದೆ. ಅಲ್ಲಿ ಸಿಲುಕಿರುವ ಭಾರತೀಯರನ್ನು ದೇಶಕ್ಕೆ ಕರೆತರಲು ಭಾರತ ಸರಕಾರ ಪ್ರಯತ್ನ ನಡೆಸುತ್ತಿದೆ ಎಂದು ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರು ಟ್ವಿಟ ಮಾಡಿ ರಾಜ್ಯದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದರು. ಸುಡಾನ್‌ನಲ್ಲಿ ನಡೆಯುತ್ತಿರುವ ಅಂತರಿಕ ಯುದ್ಧದಲ್ಲಿ ಭಾರತೀಯ ಪ್ರಜೆಯೊಬ್ಬ ಮೃತಪಟ್ಟಿದ್ದು, ೬೦ ಕ್ಕೂ ಹೆಚ್ಚು ಮಂದಿ ಸಿಲುಕಿದ್ದಾರೆ. ಇದರಲ್ಲಿ ಕರ್ನಾಟಕದ ೩೧ ಭಾರತೀಯ ಬುಡಕಟ್ಟು ನಾಗರಿಕರು ಸೇರಿದ್ದಾರೆ. ‘ಈ ನಾಗರಿಕರಿಗೆ ಸಾಕಾಗುವಷ್ಟು ಆಹಾರ ಮತ್ತು ನೀರು ಇಲ್ಲ. ಅವರನ್ನು ಮರಳಿ ಕರೆತರಲು ಕೇಂದ್ರ ಸರಕಾರ ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ. ಭಾಜಪ ಸರಕಾರ ಕೂಡಲೇ ಸುಡಾನ್ ಸರಕಾರದ ಜೋತೆ ಚರ್ಚಿಸಿ ಭಾರತೀಯರನ್ನು ತಾಯ್ನಾಡಿಗೆ ಕರೆತರಬೇಕು ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.

ಸುಡಾನ್ ನಲ್ಲಿನ ಭಾರತೀಯ ರಾಯಭಾರ ಕಚೇರಿ ಅಲ್ಲಿನ ಭಾರತೀಯರಿಗೆ ಜಾಗರೂಕರಾಗಿರುವಂತೆ ಸೂಚಿಸಿದೆ. ಭಾರತೀಯ ನಾಗರಿಕರು ಮನೆಯಲ್ಲಿಯೇ ಇರಲು ಸೂಚಿಸಲಾಗಿದೆ, ಅನಗತ್ಯವಾಗಿ ಹೊರಗೆ ಹೋಗಬೇಡಿ ಮತ್ತು ರಾಯಭಾರ ಕಚೇರಿಯಿಂದ ಸಿಗುವ ಮಾಹಿತಿಯನ್ನು ಅನುಸರಿಸಿ ಎಂದು ಹೇಳಲಾಗಿದೆ. ಸುಡಾನ್‌ಗೆ ಹೋಗಲು ಯೋಜಿಸುತ್ತಿರುವ ಭಾರತೀಯ ನಾಗರಿಕರು ತಮ್ಮ ಯೋಜನೆಗಳನ್ನು ಮುಂದೂಡುವಂತೆ ಮನವಿ ಮಾಡಿದೆ.

ಸೌದಿ ಅರೇಬಿಯಾ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ನ ವಿದೇಶಾಂಗ ಸಚಿವರೊಂದಿಗೆ ಜೈಶಂಕರ್ ಅವರ ಚರ್ಚೆ

ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಸೌದಿ ಅರೇಬಿಯಾದ ವಿದೇಶಾಂಗ ಸಚಿವ ಫೈಸಲ್ ಬಿನ್ ಫರ್ಹಾನ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ನ ವಿದೇಶಾಂಗ ಸಚಿವ ಶೇಖ್ ಅಬ್ದುಲ್ಲಾ ಬಿನ್ ಜಾಯೆದ್ ಅಲ್ ನಾಹ್ಯಾನ್ ಅವರೊಂದಿಗೆ ದೂರವಾಣಿಯಲ್ಲಿ ಚರ್ಚೆ ನಡೆಸಿದ್ದಾರೆ. ಎಂದು ಜೈಶಂಕರ ಇವರು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

ಸಂಪಾದಕೀಯ ನಿಲುವು

ಕಾಂಗ್ರೆಸ್ ಎಂದರೆ ತನ್ನ ಸ್ವಾರ್ಥವನ್ನು ಬಯಸುವ ಪಕ್ಷ !