`ದಿ ಕೇರಳ ಸ್ಟೋರಿ’ ಚಲನಚಿತ್ರ ಒಂದೇ ಸಮಯದಲ್ಲಿ 40 ಕ್ಕಿಂತಲೂ ಹೆಚ್ಚಿನ ದೇಶಗಳಲ್ಲಿ ಬಿಡುಗಡೆ !

ನವ ದೆಹಲಿ – ಭಾರತದಲ್ಲಿ ಇಲ್ಲಿಯವರೆಗೆ 60 ಲಕ್ಷಕ್ಕಿಂತಲೂ ಹೆಚ್ಚಿನ ಜನರಿಗೆ `ದಿ ಕೇರಳ ಸ್ಟೋರಿ’ ಚಲನಚಿತ್ರವನ್ನು ವೀಕ್ಷಿಸಿದ್ದಾರೆ. ಇಂದು ಒಂದು ಹೊಸ ಅಧ್ಯಾಯ ಪ್ರಾರಂಭವಾಗುತ್ತಿದೆ. `ದಿ ಕೇರಳ ಸ್ಟೋರಿ’ 40 ಕ್ಕಿಂತಲೂ ಹೆಚ್ಚಿನ ದೇಶಗಳಲ್ಲಿ ಒಮ್ಮೆಲೆ ಪ್ರದರ್ಶನಗೊಳ್ಳಲಿದೆ. ಹೆಚ್ಚೆಚ್ಚು ಆಶೀರ್ವಾದ, ಪ್ರೀತಿ ಮತ್ತು ಪ್ರಶಂಸೆಗಳಿಂದ ನಮ್ಮ ಹೃದಯ ತುಂಬಿ ಬಂದಿದೆಯೆಂದು ಈ ಚಲನಚಿತ್ರದ ನಿರ್ದೇಶಕ ಸುದೀಪ್ತೊ ಸೇನ ಟ್ವೀಟ್ ಮಾಡಿ ತಿಳಿಸಿದ್ದಾರೆ.