ಆಸ್ಟ್ರೇಲಿಯಾ ಪ್ರಧಾನಮಂತ್ರಿಯಿಂದ ಭಾರತದ ಪ್ರಧಾನಮಂತ್ರಿ ಮೋದಿಗೆ ಭರವಸೆ !
ಸಿಡ್ನಿ (ಆಸ್ಟ್ರೇಲಿಯಾ) – ಕಳೆದ ಕೆಲವು ದಿನಗಳಲ್ಲಿ ಆಸ್ಟ್ರೇಲಿಯಾದ ದೇವಾಲಯಗಳ ಮೇಲೆ ದಾಳಿ ನಡೆಯತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆಸ್ಟ್ರೇಲಿಯ ಪ್ರಧಾನಿ ಆಂಥನೀ ಅಲ್ಬನೀಸ್ ಅವರೊಂದಿಗೆ ಚರ್ಚೆ ನಡೆಸಿದರು. “ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಸೌಹಾರ್ದ ಸಂಬಂಧಕ್ಕೆ ಧಕ್ಕೆ ತರುವಂತಹ ಯಾವುದೇ ಕ್ರಮಗಳನ್ನು ನಾವು ಒಪ್ಪುವುದಿಲ್ಲ ಎಂಬ ನೀತಿಯನ್ನು ಆಸ್ಟ್ರೇಲಿಯಾ ಅಳವಡಿಸಿಕೊಂಡಿದೆ. ಭವಿಷ್ಯದಲ್ಲಿಯೂ ಇಂತಹ ಅಂಶಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಧಾನಿ ಅಲ್ಬನೀಸ್ ನಮಗೆ ಭರವಸೆ ನೀಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರು ಆಸ್ಟ್ರೇಲಿಯಾ ಪ್ರವಾಸದ ಕೊನೆಯ ದಿನದಂದು ದ್ವಿಪಕ್ಷೀಯ ಸಭೆ ನಡೆಸಿದರು. ಇದಾದ ಬಳಿಕ ಇಬ್ಬರೂ ನಾಯಕರು ಜಂಟಿ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಪ್ರಧಾನಿ ಮೋದಿ ಮಾತನಾಡುತ್ತಿದ್ದರು. ದೇವಾಲಯಗಳ ಮೇಲಿನ ದಾಳಿ ಪ್ರಕರಣದಲ್ಲಿ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಂಡಿದ್ದಕ್ಕಾಗಿ ಆಸ್ಟ್ರೇಲಿಯಾದ ಪ್ರಧಾನಿಗೆ ಪ್ರಧಾನಿ ಮೋದಿ ಧನ್ಯವಾದ ತಿಳಿಸಿದ್ದಾರೆ.
Attacks on Hindu temples have no place in Australia: Says PM Anthony Albanese after PM Modi raised the issue with himhttps://t.co/ydi6rZRIZS
— OpIndia.com (@OpIndia_com) March 11, 2023
ವ್ಯಾಪಾರ ಮತ್ತು ತಂತ್ರಜ್ಞಾನ ವಿನಿಮಯಕ್ಕೆ ಸಂಬಂಧಿಸಿದಂತೆ ಎರಡೂ ದೇಶಗಳಿಗೆ ನೆರವಾಗಲು ಆಸ್ಟ್ರೇಲಿಯಾ ಬೆಂಗಳೂರಿನಲ್ಲಿ ರಾಯಭಾರಿ ಕಛೇರಿ ತೆರೆಯಲಿದೆ ಎಂದು ಪ್ರಧಾನಿ ಅಲ್ಬನೀಸ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಸೆಪ್ಟೆಂಬರ್‌ನಲ್ಲಿ ಭಾರತದಲ್ಲಿ ಜಿ-೨೦ ಶೃಂಗಸಭೆ ನಡೆಯಲಿದೆ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡುವ ಅವಕಾಶ ಸಿಗಲಿದೆ. ಎರಡೂ ದೇಶಗಳು ಆ ಕ್ಷೇತ್ರದಲ್ಲೂ ಮುನ್ನಡೆಯಬೇಕೆಂದು ನಾನು ಬಯಸುತ್ತೇನೆ ಆದರೆ ಈ ನಿಟ್ಟಿನಲ್ಲಿ ಇದುವರೆಗೂ ಯಾವುದೇ ಪ್ರಯತ್ನ ನಡೆದಿಲ್ಲ ಎಂದು ಹೇಳೀದರು.
ಸಂಪಾದಕರ ನಿಲುವುಆಸ್ಟ್ರೇಲಿಯದಲ್ಲಿ ಹಿಂದೂ ದೇವಾಲಯಗಳ ಮೇಲಿನ ದಾಳಿಯನ್ನು ನಿಲ್ಲಿಸುವುದಾಗಿ ಆಸ್ಟ್ರೇಲಿಯಾ ಹಿಂದೆ ಭರವಸೆ ನೀಡಿತ್ತು; ಆದರೆ ಅದರ ನಂತರವೂ ದಾಳಿಗಳು ಮುಂದುವರಿದಿವೆ. ಆದ್ದರಿಂದ, ಅಂತಹ ಆಶ್ವಾಸನೆಗಳ ಮೇಲೆ ಎಷ್ಟು ನಂಬಿಕೆ ಇಡಬೇಕು ? ಎಂಬ ಪ್ರಶ್ನೇ ಹಿಂದೂಗಳ ಮನದಲ್ಲಿ ಮೂಡುತ್ತದೆ ! |