ರಾಜ್ಯದಲ್ಲಿ ಮಹಿಳೆಯರಿಗೆ ಸರಕಾರಿ ಬಸ್ಸಿನಲ್ಲಿ ಉಚಿತ ಪ್ರಯಾಣ !

ಬೆಂಗಳೂರು – ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಈಗ ಸರಕಾರದಿಂದ ರಾಜ್ಯದಲ್ಲಿನ ಸರಕಾರಿ ಬಸ್ಸಿನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಮಾಡುವ ನಿರ್ಣಯ ತೆಗೆದುಕೊಂಡಿದೆ. ರಾಜ್ಯದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಇವರು ಈ ಘೋಷಣೆ ಮಾಡಿದರು. ಇದಕ್ಕಾಗಿ ಮಹಿಳೆಯರಿಗೆ ಯಾವುದೇ ರೀತಿಯ ಷರತ್ತು ವಿಧಿಸಿಲ್ಲ ಎಂದು ಅವರು ಹೇಳಿದರು. ನಾವು ಘೋಷಣಾ ಪತ್ರದಲ್ಲಿ ಇದರ ಕುರಿತು ಯಾವುದೇ ಷರತ್ತು ವಿಧಿಸಿರಲಿಲ್ಲ.
ಈ ಹಿಂದೆ ದೆಹಲಿಯ ಆಮ್ ಆದ್ಮಿ ಪಕ್ಷದ ಸರಕಾರವು ರಾಜ್ಯದಲ್ಲಿನ ಸರಕಾರಿ ಬಸ್ಸಿನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಘೋಷಣೆ ಮಾಡಿತ್ತು.