ರಾಜ್ಯದಲ್ಲಿ ಎನ್ಐಎ ದಿಂದ ೧೬ ಸ್ಥಳಗಳಲ್ಲಿ ದಾಳಿ

ಬೆಂಗಳೂರು – ರಾಷ್ಟ್ರೀಯ ತನಿಖಾ ದಳವು (ಎನ್ಐಎ) ರಾಜ್ಯದಲ್ಲಿನ ದಕ್ಷಿಣ ಕನ್ನಡ ಜಿಲ್ಲೆಯ ೧೬ ಸ್ಥಳಗಳಲ್ಲಿ ದಾಳಿ ನಡೆಸಿದೆ. ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಸ್ಥಳಗಳಲ್ಲಿ ಈ ದಾಳಿ ನಡೆದಿದೆ. ಇದರಲ್ಲಿ ಮನೆಗಳು, ಅಂಗಡಿಗಳು ಮತ್ತು ಆಸ್ಪತ್ರೆಗಳು ಒಳಗೊಂಡಿದೆ. ಕೆಲವು ದಿನಗಳ ಹಿಂದೆ ತನಿಖಾದಳದಿಂದ ರಾಜ್ಯದಲ್ಲಿನ ಬಂಟ್ವಾಳ ಮತ್ತು ಪುತ್ತೂರಿನಲ್ಲಿ ಕೂಡ ಕೆಲವು ಸ್ಥಳಗಳಲ್ಲಿ ದಾಳಿ ನಡೆಸಿ ಐದು ಜನರನ್ನು ವಶಕ್ಕೆ ಪಡೆಯಲಾಗಿತ್ತು.

(ಸೌಜನ್ಯ – CNN-News18)