ಒಡಿಶಾದಲ್ಲಿ ಭೀಕರ ರೈಲು ಅಪಘಾತ; ಸರಕು ಸಾಗಣೆ ರೈಲಿಗೆ ಕೋರಮಂಡಲ್ ಎಕ್ಸ್ ಪ್ರೆಸ್ ಡಿಕ್ಕಿ !

18 ಬೋಗಿಗಳು ಹಳಿ ತಪ್ಪಿ 900 ಪ್ರಯಾಣಿಕರಿಗೆ ಗಾಯ, ೨೩೦ ಜನರ ಸಾವು

(ಸೌಜನ್ಯ : ದಿವ್ಯ ಮರಾಠಿ)

ಭುವನೇಶ್ವರ (ಒಡಿಶಾ) – ಇಲ್ಲಿಂದ ಚೆನ್ನೈಗೆ ಹೊರಟಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್ ಜೂನ್ 2 ರ ರಾತ್ರಿ ಒಂದು ದೊಡ್ಡ ಅಪಘಾತಕ್ಕೆ ಒಳಗಾಯಿತು. ಸಿಕ್ಕಿರುವ ಮಾಹಿತಿ ಪ್ರಕಾರ ಒಡಿಶಾದ ಬಾಲಸೋರ್ ನಿಂದ ಸುಮಾರು 40 ಕಿ.ಮೀ ದೂರದಲ್ಲಿ ಸರಕು ಸಾಗಣೆ ರೈಲಿಗೆ ಡಿಕ್ಕಿ ಹೊಡೆದಿದೆ. ಗೂಡ್ಸ್ ರೈಲಿಗೆ ಎಕ್ಸ್‌ಪ್ರೆಸ್ ಡಿಕ್ಕಿಯಾದ ನಂತರ ಎಕ್ಸ್‌ಪ್ರೆಸ್‌ನ 3 ಬೋಗಿಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಬೋಗಿಗಳು ಹಳಿತಪ್ಪಿದವು. ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ಭೋಗಿಗಳ ಸಂಖ್ಯೆ 18 ಆಗಿದೆ. ಈ ಅಪಘಾತದಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಬಲಸಿನೋರ್ ಮತ್ತು ಇತರ ಸುತ್ತಮುತ್ತಲಿನ ಜಿಲ್ಲೆಗಳಿಂದ ವೈದ್ಯಕೀಯ ತಂಡಗಳನ್ನು ಸಹ ಸಹಾಯಕ್ಕಾಗಿ ಕರೆಯಲಾಗಿದೆ.

ಈ ಅಪಘಾತದಲ್ಲಿ ಗಾಯಗೊಂಡ 900 ಕ್ಕೂ ಹೆಚ್ಚು ಪ್ರಯಾಣಿಕರನ್ನು ಇದುವರೆಗೆ ಬೆಹನಗಾ ಆಸ್ಪತ್ರೆಗೆ ದಾಖಲಿಸಲಾಗಿದೆ. ರೈಲ್ವೆ ಹಳಿಯಲ್ಲಿ ಸಿಗ್ನಲ್ ವೈಫಲ್ಯದಿಂದ ಈ ಅವಘಡ ಸಂಭವಿಸಿದ್ದು, ಎರಡೂ ರೈಲುಗಳು ಒಂದೇ ಹಳಿಯಲ್ಲಿ ಬಂದಿವೆ ಎನ್ನಲಾಗಿದೆ. ಈ ಅಪಘಾತದಲ್ಲಿ ಉಂಟಾದ ಹಾನಿಯ ಬಗ್ಗೆ ಸದ್ಯಕ್ಕೆ ಯಾವುದೇ ಅಧಿಕೃತ ಮಾಹಿತಿ ಇಲ್ಲ.