ಭಾರತದಲ್ಲಿ ಜಾತಿ, ಪಂಥ, ಲಿಂಗ ಎಂಬ ಯಾವದೇ ಬೇಧಭಾವ ಮಾಡುವುದಿಲ್ಲ ! – ಪ್ರಧಾನಿ ಮೋದಿ

ಪ್ರಧಾನಿ ಮೋದಿಯವರ ಅಮೇರಿಕಾ ಪ್ರವಾಸ

ವಾಷಿಂಗ್ಟನ್ (ಅಮೇರಿಕಾ) – ನಾವು ಪ್ರಜಾಪ್ರಭುತ್ವದಲ್ಲಿ ವಾಸಿಸುತ್ತಿದ್ದೇವೆ. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಆಧರಿಸಿದ ನಮ್ಮ ಸಂವಿಧಾನದ ಆಧಾರದ ಮೇಲೆ ನಮ್ಮ ಸರಕಾರವು ಕಾರ್ಯನಿರ್ವಹಿಸುತ್ತದೆ, ಭಾರತದಲ್ಲಿ ಜಾತಿ, ಪಂಥ, ಲಿಂಗಗಳು ಹೀಗೆ ಯಾವುದೇ ತಾರತಮ್ಯ ಮಾಡುವುದಿಲ್ಲ. ಮಾನವೀಯ ಮೌಲ್ಯಗಳು ಮತ್ತು ಮಾನವ ಹಕ್ಕುಗಳಿಲ್ಲದೆ, ಪ್ರಜಾಪ್ರಭುತ್ವವು ಉಳಿಯಲು ಸಾಧ್ಯವಿಲ್ಲ. ಭಾರತವು ಎಲ್ಲರೊಂದಿಗೆ, ಎಲ್ಲರ ವಿಶ್ವಾಸ ಮತ್ತು ಎಲ್ಲರ ಪ್ರಯತ್ನ ಈ ಆಧಾರದ ಮೇಲೆ ನಡೆಯುತ್ತಿದೆ, ಎಂದು ಪ್ರಧಾನಿ ಮೋದಿಯವರು ಅಲ್ಲಿ ಪತ್ರಕರ್ತರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದರು. ದ್ವಿಪಕ್ಷೀಯ ಸಭೆಯ ನಂತರ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕಾದ ರಾಷ್ಟ್ರಾಧ್ಯಕ್ಷ ಜೋ ಬಾಯಡೆನ್ ಇವರು ಜಂಟಿ ಪತ್ರಿಕಾಗೋಷ್ಠಿ ನಡೆಸಿದರು. ಆ ಸಮಯದಲ್ಲಿ ಭಾರತದಲ್ಲಿನ ಮಾನವ ಹಕ್ಕುಗಳು ಮತ್ತು ಅಲ್ಪಸಂಖ್ಯಾತರ ಬಗ್ಗೆ ಪ್ರಶ್ನೆಗಳನ್ನು ಕೇಳಲಾಯಿತು. ಆ ಸಮಯದಲ್ಲಿ ನರೇಂದ್ರ ಮೋದಿಯವರು ಮೇಲಿನಂತೆ ಉತ್ತರ ನೀಡಿದ್ದರು.

ಪ್ರಧಾನಮಂತ್ರಿ ಮೋದಿಯವರು ತಮ್ಮ ಮಾತನ್ನು ಮುಂದುವರೆಸುತ್ತಾ, ಭಾರತವು ಪ್ರಜಾಪ್ರಭುತ್ವದ ರಾಷ್ಟ್ರವಾಗಿದೆ, ನಮ್ಮ ಡಿ.ಎನ್.ಎನಲ್ಲಿ ಪ್ರಜಾಪ್ರಭುತ್ವ ಇದೆ ಪ್ರಜಾಪ್ರಭುತ್ವ ನಮ್ಮ ಆತ್ಮವಾಗಿದೆ. ಪ್ರಜಾಪ್ರಭುತ್ವವು ನಮ್ಮ ರಕ್ತನಾಳಗಳಲ್ಲಿದೆ. ನಾವು ಪ್ರಜಾಪ್ರಭುತ್ವದಲ್ಲಿ ಬದುಕುತ್ತಿದ್ದೇವೆ. ನಮ್ಮ ಸಂವಿಧಾನ ಮತ್ತು ನಮ್ಮ ಸರಕಾರವು, ಪ್ರಜಾಪ್ರಭುತ್ವವೇ ಎಲ್ಲರನ್ನು ಉದ್ಧರಿಸುತ್ತದೆ ಎಂಬುದು ಸಾಬೀತು ಪಡಿಸಿದೆ ಎಂದು ಹೇಳಿದರು.