ಬೆಳಗಾವಿಯ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ

ಇಬ್ಬರ ಬಂಧನ, ಹತ್ಯೆಯ ಹಿಂದಿನ ಉದ್ದೇಶ ಇನ್ನೂ ತಿಳಿದಿಲ್ಲ

ಜೈನಮುನಿ ಕಾಮಕುಮಾರ ನಂದಿ ಮಹಾರಾಜರ

ಬೆಳಗಾವಿ – ಇಲ್ಲಿಯ ಜೈನಮುನಿ ಕಾಮಕುಮಾರ ನಂದಿ ಮಹಾರಾಜರು ಜುಲೈ 5 ರಿಂದ ನಾಪತ್ತೆಯಾಗಿದ್ದರು. ಇದೀಗ ಅವರ ಶವ ಪತ್ತೆಯಾಗಿದೆ. ಮುನಿಗಳ ಹತ್ಯೆ ಮಾಡಿ ಅವರ ಶವವನ್ನು ಎಸೆದಿರುವುದು ಬೆಳಕಿಗೆ ಬಂದಿದೆ. ಪೊಲೀಸರು ಈ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಿದ್ದು, ಅವರು ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಹತ್ಯೆಯ ಹಿಂದಿನ ಕಾರಣ ಇದುವರೆಗೂ ತಿಳಿದುಬಂದಿಲ್ಲ.

ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದಲ್ಲಿ ಆಚಾರ್ಯ ಶ್ರೀ ಕಾಮಕುಮಾರ ನಂದಿ ಮಹಾರಾಜರು ಕಳೆದ 15 ವರ್ಷಗಳಿಂದ ವಾಸವಾಗಿದ್ದರು. ಆಚಾರ್ಯ ಕಾಮಕುಮಾರ ನಂದಿ ಚಾರಿಟೇಬಲ್ ಟ್ರಸ್ಟ ಅಧ್ಯಕ್ಷ ಭೀಮಪ್ಪಾ ಉಗಾರೆ ಇವರು ಕಾಮಕುಮಾರ ನಂದಿ ಮಹಾರಾಜರು ನಾಪತ್ತೆಯಾಗಿದ್ದಾರೆಂದು ಪೊಲೀಸರಿಗೆ ದೂರು ಸಲ್ಲಿಸಿದ್ದರು. ಪೊಲೀಸರು ಸಂಶಯದ ಮೇರೆಗೆ 2 ಜನರನ್ನು ವಶಕ್ಕೆ ಪಡೆದು ಅವರ ವಿಚಾರಣೆಯನ್ನು ನಡೆಸಿದಾಗ ಮುನಿಗಳ ಹತ್ಯೆ ಮಾಡಿ ಎಸೆದಿರುವ ಶವ ಸಿಕ್ಕಿರುವ ಮಾಹಿತಿ ಸಿಕ್ಕಿತು. ಹತ್ಯೆ ಮಾಡಿ ಅವರ ಮೃತದೇಹವನ್ನು ತುಂಡುಗಳಾಗಿ ಮಾಡಲಾಗಿತ್ತು. ವಶಕ್ಕೆ ಪಡೆದಿರುವ ಇಬ್ಬರೂ ಮುನಿಯನ್ನು ಅಪಹರಿಸಿ ಹತ್ಯೆ ಮಾಡಿರುವುದಾಗಿ ವಿಚಾರಣೆಯ ಸಮಯದಲ್ಲಿ ಒಪ್ಪಿಕೊಂಡಿದ್ದಾರೆ.