ರಾಜ್ಯದ ಸರಕಾರಿ ಶಾಲೆಗಳಲ್ಲಿ ಯೋಗ ಮತ್ತು ಧ್ಯಾನ ಕಲಿಸುವ ನಿರ್ಧಾರವನ್ನು ನಿರ್ಲಕ್ಷಿಸಿದ ಕಾಂಗ್ರೆಸ್ ಸರಕಾರ !

ಹಿಂದೂ ಜನಜಾಗೃತಿ ಸಮಿತಿಯಿಂದ ಟೀಕೆ

ಬೆಂಗಳೂರು – ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ, ಆರೋಗ್ಯ ಮತ್ತು ಏಕಾಗ್ರತೆಗೆ ಅತ್ಯಂತ ಉಪಯುಕ್ತವಾದ ಯೋಗ ಹಾಗೂ ಧ್ಯಾನವನ್ನು ಸರಕಾರಿ ಶಾಲೆಗಳಲ್ಲಿ ಕಲಿಸಬೇಕು ಎಂದು ರಾಜ್ಯದ ಹಿಂದಿನ ಭಾಜಪ ಸರಕಾರ ನಿರ್ಧರಿಸಿತ್ತು. ಇದಕ್ಕಾಗಿ ಈ ಶೈಕ್ಷಣಿಕ ವರ್ಷದಿಂದಲೇ ಕ್ರಮ ಕೈಗೊಳ್ಳುವಂತೆ ಆದೇಶ ಹೊರಡಿಸಲಾಗಿತ್ತು; ಆದರೆ ರಾಜ್ಯದಲ್ಲಿ ಬಂದ ಕಾಂಗ್ರೆಸ್ ಸರಕಾರವು ಶೈಕ್ಷಣಿಕ ವರ್ಷ ಆರಂಭವಾಗಿ ೧ ತಿಂಗಳು ಕಳೆದರೂ ಶಾಲೆಗಳಲ್ಲಿ ಯೋಗ, ಧ್ಯಾನ ಕಲಿಸದೆ ನಿರ್ಲಕ್ಷ್ಯ ವಹಿಸಿದೆ.

ಈ ಕುರಿತು ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರರಾದ ಶ್ರೀ. ಮೋಹನ್ ಗೌಡ ಅವರು, ಭಾಜಪ ಸರಕಾರದ ಅವಧಿಯಲ್ಲಿ ಸರಕಾರಿ ಶಾಲೆಗಳಲ್ಲಿ ಯೋಗ ಮತ್ತು ಧ್ಯಾನ ಕಲಿಸಲು ತೆಗೆದುಕೊಂಡಿರುವ ನಿರ್ಧಾರವನ್ನು ಕಾಂಗ್ರೆಸ್ ಸರಕಾರ ಸಂಪೂರ್ಣವಾಗಿ ನಿರ್ಲಕ್ಷಿಸಿರುವುದು ಖೇಧಕರವಾಗಿದೆ. ಇದರಿಂದ ಕಾಂಗ್ರೆಸ್ ರಾಜಕೀಯ ಓಲೈಕೆಗಾಗಿ ಮಕ್ಕಳ ಬೆಳವಣಿಗೆಗೆ ಅಗತ್ಯವಾದ ವಿಷಯಗಳನ್ನು ನಿರ್ಲಕ್ಷಿಸುತ್ತಿರುವುದು ಅತ್ಯಂತ ದುರಾದೃಷ್ಟಕರ ಎಂದು ಹೇಳಿದ್ದಾರೆ.

ಸಂಪಾದಕೀಯ ನಿಲುವು

ಯೋಗ ಮತ್ತು ಧ್ಯಾನ ಇವು ಹಿಂದೂ ಧರ್ಮಕ್ಕೆ ಸಂಬಂಧಿಸಿದ್ದರಿಂದ ಮತ್ತು ಹಿಂದಿನ ಭಾಜಪ ಸರಕಾರ ಅದನ್ನು ಕಲಿಸಲು ನಿರ್ಧರಿಸಿದ್ದರಿಂದಲೇ ಕಾಂಗ್ರೆಸ್ ಇದರತ್ತ ಉದ್ದೇಶಪೂರ್ವಕವಾಗಿ ದುರ್ಲಕ್ಷಿಸುತ್ತಿದೆ. ಕಾಂಗ್ರೆಸ್‌ಗೆ ಮತದಾನ ಮಾಡಿದ ಹಿಂದೂಗಳಿಗೆ ಇದು ಒಪ್ಪಿಗೆ ಇದೆಯೇ ?