ಕರ್ನಾಟಕದಲ್ಲಿ ಹಿಂದೂಗಳ ಹತ್ಯೆಗೆ ಖಂಡನೆ, ಹಿಂದೂಗಳ ರಕ್ಷಣೆಗೆ ಆಗ್ರಹ !

ಬೆಂಗಳೂರು – ಪ್ರಸ್ತುತ ಕರ್ನಾಟಕ ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ವಿವಿಧ ರೀತಿಯ ಆಕ್ರಮಣಗಳು ಹೆಚ್ಚಾಗಿವೆ. ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಕೇಸುಗಳನ್ನು ದಾಖಲಿಸಿ ಅವರಿಗೆ ಥಳಿಸುವುದು ಮತ್ತು ಭಯ ಹುಟ್ಟಿಸುವ ಪ್ರಕ್ರಿಯೆ ನಡೆಯುತ್ತಿವೆ, ಜೈನ ಮುನಿ ಆಚಾರ್ಯ ಕಾಮಕುಮಾರ ನಂದಿ ಮಹಾರಾಜರು ಮತ್ತು ಯುವ ಬ್ರಿಗೇಡ್‌ನ ಶ್ರೀ. ವೇಣುಗೋಪಾಲ ಇವರ ಹತ್ಯೆ, ಸೇರಿದಂತೆ ಇನ್ನೂ ಹಲವಾರು ಘಟನೆಗಳು ಹಿಂದೂ ಸಮಾಜದಲ್ಲಿ ಭಯದ ವಾತಾವರಣವನ್ನುಂಟು ಮಾಡಿವೆ. ಅಷ್ಟೇ ಅಲ್ಲದೆ ಮೊನ್ನೆಯಷ್ಟೇ ಬೆಂಗಳೂರಿನಲ್ಲಿ ಪ್ರತಿ ರವಿವಾರ ನಡೆಯುತ್ತಿದ್ದ ನಾಗರಕಟ್ಟೆಯ ಪೂಜೆಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಬಕ್ರೀದ್ ಸಮಯದಲ್ಲಿ ಬಾದಾಮಿ, ಶಿಕಾರಿಪುರ, ಶಿರಸಿ ಸೇರಿದಂತೆ ಹಲವೆಡೆ ಅಕ್ರಮವಾಗಿ ಗೋಹತ್ಯೆ ಮಾಡಿ, ಗೋವಿನ ಎಲುಬುಗಳನ್ನು ದೇವಸ್ಥಾನ, ಹಿಂದೂ ಮನೆಗಳ ಎದುರು ಎಸೆದು ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದಿದ್ದಾರೆ, ಹಾಗಾಗಿ ಹಿಂದೂ ಕಾರ್ಯಕರ್ತರಿಗೆ, ಹಿಂದೂ ಧರ್ಮಕ್ಕೆ ಹೋರಾಟ ಮಾಡುವವರಿಗೆ ರಕ್ಷಣೆ ನೀಡಬೇಕು, ಹಿಂದೂಗಳ ಮೇಲೆ ಆಕ್ರಮಣ ಮಾಡುವವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಲು ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯದ ೨೫ ಕ್ಕೂ ಅಧಿಕ ಸ್ಥಳಗಳಲ್ಲಿ ೬೦ ಕ್ಕೂ ಹೆಚ್ಚು ಸಂಘಟನೆಗಳ ೧೫೦೦ ಕ್ಕೂ ಹೆಚ್ಚು ಹಿಂದೂಗಳು ಹಿಂದೂ ರಾಷ್ಟ್ರ ಜಾಗೃತಿ ಆಂದೋಲನದಲ್ಲಿ ಪಾಲ್ಗೊಂಡಿದ್ದರು. ಈ ನಿಮಿತ್ತವಾಗಿ ಸರಕಾರಕ್ಕೆ ತಹಶೀಲ್ದಾರರು, ಜಿಲ್ಲಾಧಿಕಾರಿಗಳ ಮೂಲಕ ಮಾನ್ಯ ರಾಜ್ಯಪಾಲರಿಗೆ ಮನವಿಯನ್ನು ಸಹ ಸಲ್ಲಿಸಲಾಯಿತು.
ಬೆಂಗಳೂರಿನಲ್ಲಿ ನಡೆದ ಆಂದೋಲನ ದಲ್ಲಿ ರಾಷ್ಟ್ರ ರಕ್ಷಣಾ ಪಡೆಯ ಶ್ರೀ. ಪುನೀತ ಕೆರೆಹಳ್ಳಿ, ರಾಷ್ಟ್ರೀಯ ಹಿಂದೂ ಪರಿಷತ್‌ನ ಶ್ರೀ. ವಿಕ್ರಮ್ ಶೆಟ್ಟಿ, ಶ್ರೀರಾಮ ಸೇನೆಯ ವಿಭಾಗೀಯ ಅಧ್ಯಕ್ಷ ಶ್ರೀ. ಸುಂದರೇಶ, ಹಿಂದವೀ ಜಟ್ಕಾ ಮೀಟ್‌ನ ಶ್ರೀ. ಮುನೇಗೌಡ, ಹಿಂದೂ ಮಹಾಸಭಾದ ಶ್ರೀ. ಸುರೇಶ ಜೈನ್, ಉದ್ಯಮಿ ಶ್ರೀ. ಪ್ರಶಾಂತ ಸಂಬರಗಿ, ಲೇಖಕ ಶ್ರೀ. ರೋಹಿತ ಚಕ್ರತೀರ್ಥ, ಪ್ರೊಫೆಸರ್ ಎಸ್.ಆರ್ ಲೀಲಾ, ಶ್ರೀ. ಅಡ್ಡಂಡ ಕಾರ್ಯಪ್ಪನವರು, ಶ್ರೀ. ಸುರೇಶ ಗೌಡ ಇವರು ಹಾಗೂ ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರ ಶ್ರೀ. ಮೋಹನ ಗೌಡ ಸೇರಿದಂತೆ ೧೦ ಕ್ಕೂ ಹೆಚ್ಚು ಸಂಘಟನೆಗಳ ೩೫೦ ಕ್ಕೂ ಹೆಚ್ಚು ಹಿಂದೂ ಕಾರ್ಯಕರ್ತರು ಉಪಸ್ಥಿತರಿದ್ದರು.
ವಕ್ಫ್ ಬೋರ್ಡ್ ವಶಪಡಿಸಿಕೊಂಡ ಭೂಮಿಯನ್ನು ಮೂಲ ಮಾಲೀಕರಿಗೆ ಹಿಂತಿರುಗಿಸಿ !

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಕ್ಫ್ ಬೋರ್ಡ್ ತನ್ನ ಕಾನೂನನ್ನು ದುರುಪಯೋಗಪಡಿಸಿ ಸರಕಾರಿ ಮತ್ತು ಖಾಸಗಿ ಜಮೀನುಗಳನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಳ್ಳುತ್ತಿದೆ. ಆ ಮೂಲಕ ದೇಶದ ೮ ಲಕ್ಷ ಎಕರೆ ಜಮೀನನ್ನು ಕಬಳಿಸಿದೆ. ಇದೊಂದು ದೊಡ್ಡ ‘ಲ್ಯಾಂಡ್ ಜಿಹಾದ್ ಆಗಿದೆ.
ಹಾಗಾಗಿ ಈ ಕಾನೂನನ್ನು ರದ್ದುಗೊಳಿಸಿ ಜಮೀನಿನ ನಿಜವಾದ ಮಾಲೀಕರಿಗೆ ಅದರ ಅಧಿಕಾರ ವನ್ನು ನೀಡಬೇಕು. ದೇಶದಲ್ಲಿ ‘ಸಮಾನ ನಾಗರಿಕ ಕಾನೂನು ಜಾರಿಗೆ ತರುವ ಮೂಲಕ ಅಲ್ಪಸಂಖ್ಯಾತರ ಹೆಸರಿನಲ್ಲಿ ಜಾರಿಯಲ್ಲಿರುವ ಎಲ್ಲಾ ವಿಶೇಷ ಸೌಲಭ್ಯಗಳು, ಕಾನೂನುಗಳು, ಆಯೋಗಗಳು, ಮಂಡಳಿಗಳು, ಸರಕಾರಿ ಇಲಾಖೆ ಗಳನ್ನು ರದ್ದುಪಡಿಸಬೇಕು ಮತ್ತು ಎಲ್ಲರಿಗೂ ಸಮಾನ ನಡವಳಿಕೆ ಸಿಗುವಂತಾಗಬೇಕು. ಈ ಬೇಡಿಕೆಗಳನ್ನು ಅಂಗೀಕರಿಸದಿದ್ದರೆ ‘ವಕ್ಫ್ ಕಾನೂನು ವಿರುದ್ಧ ಪ್ರಬಲ ಚಳುವಳಿ ನಡೆಸಬೇಕಾಗುತ್ತದೆ ಎಂದು ಈ ಆಂದೋಲನದ ಮೂಲಕ ಎಚ್ಚರಿಸಲಾಯಿತು.
ದಾವಣಗೆರೆಯ ಜಿಲ್ಲಾಧಿಕಾರಿ ಶ್ರೀ. ಶಿವಾನಂದ ಕಪಾಶಿ ಇವರಿಗೆ ಮನವಿ ನೀಡುತ್ತಿರುವ ಹಿಂದೂ ಜನಜಾಗೃತಿ ಸಮಿತಿಯ ಶ್ರೀ. ವಿಜಯ ರೇವಣಕರ
ಮತ್ತು ಹಿಂದೂ ರಾಷ್ಟ್ರ ಸೇನೆಯ ರಾಜ್ಯ ವಕ್ತಾರ ಶ್ರೀ. ಸಂದೀಪ ಕೆ.ಎನ್.
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath