ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಮೂರ್ತಿಯ ಪ್ರಾಣಪ್ರತಿಷ್ಠಾಪನೆಯ ಸಮಾರಂಭ ಜನವರಿ 15, 2024 ರಂದು ಪ್ರಾರಂಭ !

ಅಯೋಧ್ಯೆ (ಉತ್ತರಪ್ರದೇಶ) – ಶ್ರೀರಾಮಜನ್ಮಭೂಮಿಯಲ್ಲಿ ನಿರ್ಮಿಸಲಾಗುತ್ತಿರುವ ಶ್ರೀರಾಮನ ದೇವಸ್ಥಾನದಲ್ಲಿ ಜನವರಿ 15, 2024 ರಂದು ರಾಮಲಲ್ಲಾ ಮೂರ್ತಿಯ ಪ್ರಾಣಪ್ರತಿಷ್ಠಾಪನೆ ಸಮಾರಂಭವು ಪ್ರಾರಂಭವಾಗಲಿದ್ದು, ಜನವರಿ 24 ರಂದು ಈ ವಿಧಿ ಪೂರ್ಣಗೊಳ್ಳಲಿದೆ. ಈ ಮಹೋತ್ಸವಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲಾಗಿದೆ ಎಂದು ದೇವಸ್ಥಾನದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಇವರು ಮಾಹಿತಿ ನೀಡಿದ್ದಾರೆ.