ಬಂಟ್ವಾಳದಲ್ಲಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಅಬ್ದುಲ್ ಸಲೀಂ ಬಂಧನ

ವ್ಯಕ್ತಿ ಗಾಂಜಾ ಸೇವಿಸಿದ್ದ ವೈದ್ಯಕೀಯ ತಪಾಸಣೆಯಲ್ಲಿ ಬಹಿರಂಗ

ಬಂಟ್ವಾಳ (ದ.ಕ) – ಇಲ್ಲಿಯ ನಂದಾಪುರ ಜಂಕ್ಷನ್ ಬಳಿ ಅಬ್ದುಲ್ ಸಲೀಂ (32 ವರ್ಷ) ಗಾಂಜಾ ಸೇವಿಸಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದನು. ಇದರಿಂದ ಬೇಸತ್ತ ಸಾರ್ವಜನಿಕರು ಸ್ಥಳಿಯ ಪೊಲೀಸರಿಗೆ ದೂರು ನೀಡಿದರು. ಬಳಿಕ ಬಂಟ್ವಾಳ ನಗರ ಪೊಲೀಸ್ ಎಸ್.ಐ. ರಾಮಕೃಷ್ಣ ಇವರ ನೇತೃತ್ವದಲ್ಲಿ ಆರೋಪಿಯನ್ನು ನಂದಾವರದಲ್ಲಿ ಬಂಧಿಸಿದರು. ನಂತರ ಆತನ ವೈದ್ಯಕೀಯ ತಪಾಸಣೆ ಮಾಡಿದಾಗ ಆತ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ. ಈತ ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಕಲೆಂಜಿಬೈಲು ನಿವಾಸಿಯಾಗಿದ್ದು ಆತ ಮುನ್ನೂರು ಗ್ರಾಮದ ನಂದಾವರದ ತನ್ನ ಸಂಬಂಧಿಕರ ಮನೆಗೆ ಬಂದಾಗ ಈ ರೀತಿಯ ಕೃತ್ಯ ಎಸಗಿದ್ದ. ಈತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.