ಇಸ್ಲಾಮಾಬಾದ್ (ಪಾಕಿಸ್ತಾನ) – ಜಿಹಾದಿ ಭಯೋತ್ಪಾದಕ ಸಂಘಟನೆಗಳಾದ ‘ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್’ (ಟಿಟಿಪಿ) ಮತ್ತು ‘ಇಸ್ಲಾಮಿಕ್ ಸ್ಟೇಟ್ ಖುರಾಸಾನ’ ವಿರುದ್ಧ ಪಾಕಿಸ್ತಾನ ಕ್ರಮ ಕೈಗೊಂಡಿದೆ. ಪಾಕಿಸ್ತಾನ ಅನೇಕ ಬಾರಿ ಹೇಳಿದ್ದರೂ, ಅಫಘಾನಿಸ್ತಾನ ಸರಕಾರ ತಾಲಿಬಾನಿ ಭಯೋತ್ಪಾದಕರ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಪಾಕಿಸ್ತಾನ ಆರೋಪಿಸುತ್ತಿದೆ. ಇದೇ ಸಮಯದಲ್ಲಿ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಇವರು, ಒಂದು ವೇಳೆ ಅಫ್ಘಾನಿಸ್ತಾನದ ತಾಲಿಬಾನಿ ಸರಕಾರ ‘ಟಿಟಿಪಿ’ ವಿರುದ್ಧ ಕ್ರಮ ಕೈಗೊಳ್ಳಲು ವಿಫಲವಾದರೆ, ಅಂತರಾಷ್ಟ್ರೀಯ ಕಾನೂನಿನ ಪ್ರಕಾರ, ‘ಆತ್ಮರಕ್ಷಣೆ’ಗಾಗಿ ಅಫ್ಘಾನಿಸ್ತಾನದಲ್ಲಿ ಅಡಗಿರುವ ಭಯೋತ್ಪಾದಕರ ವಿರುದ್ಧ ಕ್ರಮ ಕೈಗೊಳ್ಳಲು ಪಾಕಿಸ್ತಾನಕ್ಕೆ ಹಕ್ಕಿದೆ ಎಂದು ಹೇಳಿದ್ದಾರೆ. ಇದು ಪಾಕಿಸ್ತಾನಕ್ಕೆ ಕೊನೆಯ ಆಯ್ಕೆಯಾಗಿದೆ ಎಂದೂ ಭುಟ್ಟೋ ಹೇಳಿದ್ದಾರೆ. ಮತ್ತೊಂದೆಡೆ, ಟಿಟಿಪಿ ಭಯೋತ್ಪಾದಕರು ಅಫ್ಘಾನಿಸ್ತಾನದಲ್ಲಿಲ್ಲ. ಅವರು ಪಾಕಿಸ್ತಾನದಲ್ಲಿದ್ದಾರೆ ಎಂದು ತಾಲಿಬಾನಿ ಸರಕಾರ ಹೇಳುತ್ತಿದೆ. ಕೆಲವು ದಿನಗಳ ಹಿಂದೆ ಪಾಕಿಸ್ತಾನದ ಬಜೌರ್‌ನಲ್ಲಿ ಇಸ್ಲಾಮಿಕ್ ಸ್ಟೇಟ್ ಖುರಾಸಾನ ನಡೆಸಿದ ಆತ್ಮಾಹುತಿ ದಾಳಿಯಲ್ಲಿ 54 ಜನರು ಸಾವನ್ನಪ್ಪಿದ್ದರು ಮತ್ತು 200 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.
ಸಂಪಾದಕೀಯ ನಿಲುವು
ಪಾಕಿಸ್ತಾನ ಏನು ಬಿತ್ತಿದೆಯೋ ಅದು ಬೆಳೆದಿದೆ. ಅವರು ಪೋಷಿಸಿದ ಭಯೋತ್ಪಾದನೆ ಅವರ ಬುಡಕ್ಕೆ ಬಂದಿದೆ ಇದೇ ಸತ್ಯ ! |