ದೇಶದ 14 ರಾಜ್ಯಗಳಲ್ಲಿ ಧಾರಾಕಾರ ಮಳೆಯ ಮುನ್ನೆಚ್ಚರಿಕೆ !

ಹಿಮಾಚಲ ಪ್ರದೇಶದ ಸೋಲನ್ ನಲ್ಲಿ ಭೂಕುಸಿತ, ರಾಜ್ಯದ 242 ರಸ್ತೆಗಳು ಬಂದ್ !

ನವ ದೆಹಲಿ – ಹವಾಮಾನ ಇಲಾಖೆಯು ದೇಶದ 14 ರಾಜ್ಯಗಳಲ್ಲಿ ಧಾರಾಕಾರ ಮಳೆಯ ಮುನ್ನೆಚ್ಚರಿಕೆಯನ್ನು ನೀಡಿದೆ. ಹಿಮಾಚಲ ಪ್ರದೇಶ, ಉತ್ತರಾಖಂಡ, ಉತ್ತರ ಪ್ರದೇಶ, ಬಿಹಾರ, ಸಿಕ್ಕಿಂ, ಬಂಗಾಳ, ಅಸ್ಸಾಂ, ಮೇಘಾಲಯ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.

1. ಉತ್ತರಾಖಂಡ ರಾಜ್ಯದ ಹೆಚ್ಚಿನ ಜಿಲ್ಲೆಗಳಲ್ಲಿ ‘ರೆಡ್ ಅಲರ್ಟ್’ ಘೋಷಿಸಲಾಗಿದೆ.
2. ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯಲ್ಲಿ ಆಗಸ್ಟ್ 11 ರಂದು ಭೂಕುಸಿತ ಸಂಭವಿಸಿದೆ. ಇದರಿಂದಾಗಿ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 5 ನ್ನು ಮುಚ್ಚಲಾಗಿದೆ. ರಾಜ್ಯಾದ್ಯಂತ ಸುರಿಯುತ್ತಿರುವ ಮಳೆಯಿಂದಾಗಿ 242 ರಸ್ತೆಗಳನ್ನು ಬಂದ್ ಮಾಡಲಾಗಿದೆ.
3. ಬಿಹಾರದ ಪಾಟಲೀಪುತ್ರ ನಗರದಲ್ಲಿ ಗಂಗಾ ನದಿಯು ಅಪಾಯದ ಮಟ್ಟವನ್ನು ತಲುಪಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
4. ಚಂಡೀಗಢದ ಸುಖನಾ ಸರೋವರದ ನೀರು ಅಪಾಯದ ಮಟ್ಟವನ್ನು ತಲುಪಿದೆ.
5. ಹರಿಯಾಣದ 13 ನಗರಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಿದೆ.