ಆಗಸ್ಟ್ 13-15 ರವರೆಗೆ ‘ಹರ್ ಘರ್ ತಿರಂಗ’ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಪ್ರಧಾನಿ ಮೋದಿಯಿಂದ ಕರೆ

ಭಾರತದ ಸ್ವಾತಂತ್ರ್ಯದ 75 ನೇ ವರ್ಷವನ್ನು ಆಚರಿಸುವ ‘ಆಜಾದಿ ಕಾ ಅಮೃತ್ ಮಹೋತ್ಸವ’ದ ಸಂದರ್ಭದಲ್ಲಿ, ಪ್ರಧಾನಿ ಮೋದಿ ಕಳೆದ ವರ್ಷ ಜುಲೈ 22 ರಂದು ‘ಹರ್ ಘರ್ ತಿರಂಗ’ ಅಭಿಯಾನವನ್ನು ಪ್ರಾರಂಭಿಸಿದರು. ಭಾರತದ ಧ್ವಜವು ಸ್ವಾತಂತ್ರ್ಯ ಮತ್ತು ರಾಷ್ಟ್ರೀಯ ಏಕತೆಯ ಸ್ಫೂರ್ತಿಯನ್ನು ಸಂಕೇತಿಸುತ್ತದೆ ಎಂದು ಟ್ವಿಟರ್‌ನಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ. ಭಾರತೀಯರು ತಿರಂಗಾ ಹಿಡಿದಿರುವ ತಮ್ಮ ಛಾಯಾಚಿತ್ರಗಳನ್ನು ‘ಹರ್ ಘರ್ ತಿರಂಗ’ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡುವಂತೆ ಅವರು ಒತ್ತಾಯಿಸಿದರು.

“ತಿರಂಗ ಇದು ಸ್ವಾತಂತ್ರ್ಯ ಮತ್ತು ರಾಷ್ಟ್ರೀಯ ಏಕತೆಯ ಸ್ಫೂರ್ತಿಯನ್ನು ಸಂಕೇತಿಸುತ್ತದೆ. ಪ್ರತಿಯೊಬ್ಬ ಭಾರತೀಯನು ತ್ರಿವರ್ಣ ಧ್ವಜದೊಂದಿಗೆ ಭಾವನಾತ್ಮಕ ಸಂಪರ್ಕವನ್ನು ಹೊಂದಿದ್ದಾನೆ ಮತ್ತು ಇದು ಮತ್ತಷ್ಟು ರಾಷ್ಟ್ರೀಯ ಪ್ರಗತಿಗೆ ಶ್ರಮಿಸಲು ನಮಗೆ ಸ್ಫೂರ್ತಿ ನೀಡುತ್ತದೆ. ಆಗಸ್ಟ್ 13 ರಿಂದ 15 ರ ನಡುವೆ ನಡೆಯುವ ಹರಘರ್‍‌ ತಿರಂಗ ಆಂದೋಲನದಲ್ಲಿ ಪಾಲ್ಗೊಳ್ಳುವಂತೆ ನಾನು ನಿಮ್ಮೆಲ್ಲರನ್ನು ಕೋರುತ್ತೇನೆ. ತಿರಂಗದೊಂದಿಗೆ ನಿಮ್ಮ ಫೋಟೋಗಳನ್ನು https://harghartiranga.com/ ಇಲ್ಲಿ ಅಪ್‌ಲೋಡ್ ಮಾಡಿ” ಎಂದು ಮೋದಿ ಟ್ವೀಟ್ ಮಾಡಿದ್ದಾರೆ.