ಪ್ರಧಾನಮಂತ್ರಿ ಮೋದಿಯವರಿಂದ ಕೆಂಪು ಕೋಟೆ ಮೇಲೆ ಧ್ವಜಾರೋಹಣ

ದೆಹಲಿ – 77ನೇ ಸ್ವಾತಂತ್ಯ್ರೋತ್ಸವದ ನಿಮಿತ್ತ ಪ್ರಧಾನಿ ಮೋದಿಯವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು. ಪ್ರಧಾನಿ ಮೋದಿಯವರು ಮೊದಲು ರಾಜ್ ಘಾಟ್ ಗೆ ತೆರಳಿ ನಮನ ಸಲ್ಲಿಸಿದ ಬಳಿಕ ಕೆಂಪುಕೋಟೆಗೆ ಆಗಮಿಸಿದರು, ಅವರು ಆಗಮಿಸುತ್ತಿದ್ದಂತೆ ಮೂರು ಸೇನಾಪಡೆಗಳು ಗೌರವ ಸಲ್ಲಿಸಿದವು.

ಈ ಸಮಯದಲ್ಲಿ ಅವರು ದೇಶವನ್ನುದ್ದೇಶಿಸಿ ಭಾಷಣ ಮಾಡಿದರು,

ಇದರಲ್ಲಿ

1. ಭಾರತವು ಪ್ರಜಾಪ್ರಭುತ್ವ ಹಾಗೂ ಜನಸಂಖ್ಯೆಯಲ್ಲಿ ಮಂಚೂಣಿಯಲ್ಲಿದೆ. ಇಂತಹ ದೊಡ್ಡ ದೇಶದ ನನ್ನ 140 ಕೋಟಿ ಕುಟುಂಬ ಸದಸ್ಯರು ಇಂದು ಸ್ವಾತಂತ್ಯ್ರ ದಿನಾಚರಣೆ ಆಚರಿಸುತ್ತಿದ್ದಾರೆ.

2. ಸ್ವಾತಂತ್ಯ್ರ ಹೋರಾಟದಲ್ಲಿ ಎಲ್ಲಾ ಕ್ರಾಂತಿಕಾರಿಗಳಿಗೆ ನಾನು ಗೌರವ ಸಲ್ಲಿಸುತ್ತೇನೆ.

3. ತಮ್ಮ ಭಾಷಣದಲ್ಲಿ ಮಣಿಪುರದಲ್ಲಿ ಶಾಂತಿ ನೆಲೆಸುವಂತೆ ಮನವಿ ಮಾಡಿದರು. ದೇಶ ಮಣಿಪುರದ ಜನರೊಂದಿಗೆ ನಿಂತಿದೆ. ಶಾಂತಿಯಿಂದಲೇ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ. ಕೇಂದ್ರ ಹಾಗೂ ರಾಜ್ಯ ಸರಕಾರ ಅಲ್ಲಿನ ಪರಿಹಾರ ಕಂಡುಕೊಳ್ಳಲು ಎಲ್ಲಾರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ ಎಂದರು.

4. ಈ ಬಾರಿ, ನೈಸರ್ಗಿಕ ವಿಕೋಪವು ದೇಶದ ಹಲವಾರು ಭಾಗಗಳಲ್ಲಿ ಊಹಿಸಲಾಗದ ಬಿಕ್ಕಟ್ಟುಗಳನ್ನು ಸೃಷ್ಟಿಸಿದೆ. ಇದದಿಂದ ಸಂಕಷ್ಟಕ್ಕೀಡಾದ ಎಲ್ಲಾ ಕುಟುಂಬಗಳಿಗೆ ನಾನು ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ.

5. ನಾನು ಕಳೆದ 1000 ವರ್ಷಗಳ ಬಗ್ಗೆ ಮಾತನಾಡುತ್ತಿದ್ದೇನೆ. ಏಕೆಂದರೆ, ದೇಶದ ಮುಂದೆ ಮತ್ತೊಮ್ಮೆ ಅವಕಾಶವಿದೆ ಎಂದು ನಾನು ನೋಡುತ್ತೇನೆ. ಈ ಯುಗದಲ್ಲಿ ನಾವು ಏನು ಮಾಡುತ್ತೇವೆ, ಒಂದರ ನಂತರ ಒಂದರಂತೆ ನಾವು ತೆಗೆದುಕೊಳ್ಳುವ ಕ್ರಮಗಳು ಮತ್ತು ನಾವು ತೆಗೆದುಕೊಳ್ಳುವ ನಿರ್ಧಾರಗಳು ಮುಂಬರುವ 1000 ವರ್ಷಗಳಲ್ಲಿ ದೇಶದ ಸುವರ್ಣ ಇತಿಹಾಸವನ್ನು ರೂಪಿಸುತ್ತವೆ ಎಂದರು.