೩೦ ಆಗಸ್ಟ್ ೨೦೨೩ ರಂದು ಇರುವ ರಕ್ಷಾಬಂಧನದ ಮಾಡುವ ಮುಹೂರ್ತ ಯಾವುದು ? ಮತ್ತು ಅದರ ಇತಿಹಾಸ

ಇತಿಹಾಸ

ಅ. ‘ಪಾತಾಳದಲ್ಲಿನ ಬಲಿರಾಜನ ಕೈಗೆ ಲಕ್ಷ್ಮೀಯು ರಾಖಿಯನ್ನು ಕಟ್ಟಿ ಅವನನ್ನು ತನ್ನ ಸಹೋದರನನ್ನಾಗಿ ಮಾಡಿ ಕೊಂಡಳು ಮತ್ತು ನಾರಾಯಣನನ್ನು ಮುಕ್ತಗೊಳಿಸಿದಳು. ಆ ದಿನ ಶ್ರಾವಣ ಹುಣ್ಣಿಮೆ ಇತ್ತು.’

ಆ. ಭವಿಷ್ಯಪುರಾಣದಲ್ಲಿ ಹೇಳಿರುವಂತೆ ರಕ್ಷಾ ಬಂಧನವು ಮೂಲತಃ ರಾಜರಿಗಾಗಿತ್ತು. ರಾಖಿಯ ಒಂದು ಹೊಸ ಪದ್ಧತಿಯು ಇತಿಹಾಸಕಾಲದಿಂದ ಪ್ರಾರಂಭವಾಯಿತು.

ಆ ೨. ಭಾವನಿಕ ಮಹತ್ವ : ರಾಖಿಯನ್ನು ಸಹೋದರಿಯು ಸಹೋದರನ ಕೈಗೆ ಕಟ್ಟುವುದಿರುತ್ತದೆ. ಇದರ ಹಿಂದೆ ಸಹೋದರನ ಏಳಿಗೆಯಾಗಬೇಕು ಮತ್ತು ಸಹೋದರನು ಸಹೋದರಿಯ ರಕ್ಷಣೆ ಯನ್ನು ಮಾಡಬೇಕು ಎನ್ನುವ ಉದ್ದೇಶವಿರುತ್ತದೆ. ಸಹೋದರಿಯು ಸಹೋದರನಿಗೆ ರಾಖಿಯನ್ನು ಕಟ್ಟುವುದಕ್ಕಿಂತ ಯಾರಾದರೊಬ್ಬ ತರುಣನು / ಪುರುಷನು ಯಾರಾದರೊಬ್ಬ ತರುಣಿಯಿಂದ / ಸ್ತ್ರೀಯಿಂದ ರಾಖಿಯನ್ನು ಕಟ್ಟಿಸಿಕೊಳ್ಳುವುದು ಹೆಚ್ಚು ಮಹತ್ವದ್ದಾಗಿದೆ; ಇದರಿಂದ ತರುಣಿಯ ಕಡೆಗೆ / ಸ್ತ್ರೀಯರ ಕಡೆಗೆ ನೋಡುವ ವಿಶೇಷವಾಗಿ ಯುವಕರ ಮತ್ತು ಪುರುಷರ ದೃಷ್ಟಿಕೋನವು ಬದಲಾಗುತ್ತದೆ.

ಆ ೩. ರಾಖಿಯನ್ನು ಕಟ್ಟುವುದು : ಅಕ್ಕಿ, ಬಂಗಾರ ಮತ್ತು ಬಿಳಿಸಾಸಿವೆ ಗಳನ್ನು ಒಂದು ಗೂಡಿಸಿ ಸೆರಗಿನಲ್ಲಿ ಕಟ್ಟಿದರೆ ರಕ್ಷಾ ಅರ್ಥಾತ್‌ ರಾಖಿಯು ತಯಾರಾಗುತ್ತದೆ.

ಏನ ಬದ್ಧೋ ಬಲೀ ರಾಜಾ, ದಾನವೇಂದ್ರೋ ಮಹಾಬಲಃ |
ತೇನ ತ್ವಾಮಪಿ ಬಧ್ನಾಮಿ ರಕ್ಷೇ ಮಾ ಚಲ ಮಾ ಚಲ ||

ಅರ್ಥ : ಮಹಾಬಲಿ ಮತ್ತು ದಾನವೇಂದ್ರನಾದ ಬಲಿರಾಜನು ಯಾವುದರಿಂದ ಬದ್ಧನಾದನೋ, ಆ ರಾಖಿಯಿಂದ ನಾನು ನಿನ್ನನ್ನೂ ಕಟ್ಟುತ್ತೇನೆ. ಎಲೈ ರಾಖಿಯೇ, ನೀನು ವಿಚಲಿತಳಾಗಬೇಡ.

ಆ ೪. ಪ್ರಾರ್ಥನೆ : ಸಹೋದರಿಯು ಸಹೋದರನ ಕಲ್ಯಾಣಕ್ಕಾಗಿ ಮತ್ತು ಸಹೋದರನು ಸಹೋದರಿಯ ರಕ್ಷಣೆಗಾಗಿ ಪ್ರಾರ್ಥನೆಯನ್ನು ಮಾಡು ವುದರೊಂದಿಗೆ ಇಬ್ಬರೂ ‘ರಾಷ್ಟ್ರ ಮತ್ತು ಧರ್ಮರಕ್ಷಣೆಗಾಗಿ ನಮ್ಮಿಂದ ಪ್ರಯತ್ನವಾಗಲಿ’, ಎಂದು ಈಶ್ವರನಲ್ಲಿ ಪ್ರಾರ್ಥನೆಯನ್ನು ಮಾಡಬೇಕು.

ಆ ೫. ರಾಖಿಯ ಮಾಧ್ಯಮದಿಂದಾಗುವ ದೇವತೆಗಳ ವಿಡಂಬನೆಯನ್ನು ತಡೆಗಟ್ಟಿ ! : ಇತ್ತೀಚೆಗೆ ರಾಖಿಯ ಮೇಲೆ ‘ಓಂ’ ಅಥವಾ ದೇವತೆಗಳ ಚಿತ್ರಗಳಿರುತ್ತವೆ. ರಾಖಿಯನ್ನು ಉಪಯೋಗಿಸಿದ ನಂತರ ಅದು ಆಚೀಚೆ ಬಿದ್ದು ದೇವತೆಗಳ ಅಥವಾ ಧರ್ಮಪ್ರತೀಕಗಳ ವಿಡಂಬನೆಯಾಗುತ್ತದೆ. ಇದರಿಂದ ಪಾಪ ತಗಲುತ್ತದೆ. ಇದನ್ನು ತಡೆಗಟ್ಟಲು ರಾಖಿಯನ್ನು ನೀರಿನಲ್ಲಿ ವಿಸರ್ಜಿಸಬೇಕು !

(ಆಧಾರ : ಸನಾತನ ನಿರ್ಮಿತ ಗ್ರಂಥ ‘ಹಬ್ಬಗಳನ್ನು ಆಚರಿಸುವ ಯೋಗ್ಯ ಪದ್ಧತಿ ಮತ್ತು ಶಾಸ್ತ್ರ’)