ಕಾಶ್ಮೀರದಲ್ಲಿ ಶಸ್ತ್ರಾಸ್ತ್ರಗಳು ವಶ

ಶ್ರೀನಗರ (ಜಮ್ಮು-ಕಾಶ್ಮೀರ) – ಭದ್ರತಾಪಡೆಗಳು ಕುಪವಾಡಾದಲ್ಲಿ ಶೋಧ ಕಾರ್ಯಾಚರಣೆ ವೇಳೆ ಶಸ್ತ್ರಾಸ್ತ್ರಗಳ ಸಂಗ್ರಹವನ್ನು ವಶಪಡಿಸಿಕೊಂಡಿದ್ದಾರೆ. ಇದರಲ್ಲಿ 5 ಎಕೆ 47 ರೈಫಲ್‌ಗಳು, 4 ಹ್ಯಾಂಡ್ ಗ್ರೆನೇಡ್‌ಗಳು ಇತ್ಯಾದಿಗಳಿವೆ. ಗೌಪ್ಯ ಮಾಹಿತಿ ಆಧರಿಸಿ ಭಾರತೀಯ ಸೇನೆ, ಗಡಿ ಭದ್ರತಾ ಪಡೆ ಮತ್ತು ಪೊಲೀಸರು ಜಂಟಿಯಾಗಿ ಶೋಧ ಕಾರ್ಯಾಚರಣೆ ನಡೆಸಿದ್ದರು.

ಸೋಪೋರ್‌ನಲ್ಲಿ ಪೊಲೀಸರು ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ. ಅವರಿಂದ ಪಿಸ್ತೂಲ್ ಮತ್ತು ಗ್ರೆನೇಡ್ ವಶಪಡಿಸಿಕೊಳ್ಳಲಾಗಿದೆ.