|
ನವ ದೆಹಲಿ – ಗಲ್ಲು ಶಿಕ್ಷೆಗೆ ಗುರಿಯಾದ ಅಪರಾಧಿಯು ರಾಷ್ಟ್ರಪತಿಗಳ ಬಳಿ ಕ್ಷಮಾದಾನಕ್ಕಾಗಿ ಅರ್ಜಿ ಸಲ್ಲಿಸಿದರೆ ಮತ್ತು ರಾಷ್ಟ್ರಪತಿಗಳು ಆ ಅರ್ಜಿಯನ್ನು ತಿರಸ್ಕರಿಸಿದರೆ, ಅವರು ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಬಹುದಾಗಿತ್ತು; ಆದರೆ ಇದೀಗ ಕೇಂದ್ರ ಸರಕಾರ ಈ ನಿಟ್ಟಿನಲ್ಲಿ ಕಾನೂನಿನಲ್ಲಿ ಬದಲಾವಣೆ ಮಾಡುವ ಮೂಲಕ ಈ ಸೌಲಭ್ಯವನ್ನು ರದ್ದುಗೊಳಿಸಿದೆ. ಹಾಗಾಗಿ ಇನ್ನು ಮುಂದೆ ಆರೋಪಿಗಳ ಕ್ಷಮಾದಾನ ಅರ್ಜಿಯ ಕುರಿತು ರಾಷ್ಟ್ರಪತಿಗಳ ತೀರ್ಮಾನವೇ ಅಂತಿಮವಾಗಿರುತ್ತದೆ. ರಾಷ್ಟ್ರಪತಿಗಳು ತೆಗೆದುಕೊಂಡ ನಿರ್ಧಾರವನ್ನು ದೇಶದ ಯಾವುದೇ ನ್ಯಾಯಾಲಯದಲ್ಲಿ ಪ್ರಶ್ನಿಸಲು ಸಾಧ್ಯವಿಲ್ಲ. ಕೇಂದ್ರ ಸರಕಾರವು ಮುಂಗಾರು ಅಧಿವೇಶನದಲ್ಲಿ ಅಂಗೀಕರಿಸಿದ ಭಾರತೀಯ ನಾಗರಿಕ ರಕ್ಷಣಾ ಸಂಹಿತೆ ಮಸೂದೆಯಲ್ಲಿ ಈ ಬದಲಾವಣೆಯನ್ನು ಮಾಡಲಾಗಿದೆ. ಈ ಮೂಲಕ ರಾಷ್ಟ್ರಪತಿಗಳಿಗೆ ಅನೇಕ ಅಧಿಕಾರಗಳನ್ನು ನೀಡಲಾಗಿದೆ.
BNSS Bill 2023: President’s decision on death row convicts to be final; no provision of appeal
Read: https://t.co/nlkftG5YNq#BNSSBill2023 pic.twitter.com/ET5b2RfA1N
— News9 (@News9Tweets) August 31, 2023
ಈ ಹಿಂದೆ ಗಲ್ಲುಶಿಕ್ಷೆಗೆ ಗುರಿಯಾದ ಅಪರಾಧಿಗಳು ರಾಷ್ಟ್ರಪತಿಗಳಿಗೆ ಕ್ಷಮಾದಾನಕ್ಕಾಗಿ ಅರ್ಜಿಯನ್ನು ಸಲ್ಲಿಸಿದರೆ ಮತ್ತು ರಾಷ್ಟ್ರಪತಿಗಳು ಅವರ ಶಿಕ್ಷೆಯನ್ನು ತಗ್ಗಿಸಿದರೆ, ಅವರಿಗೆ ದೇಶದ ನ್ಯಾಯಾಲಯಕ್ಕೆ ಅದರ ಹಿಂದಿರುವ ಕಾರಣವನ್ನು ಸ್ಪಷ್ಟಗೊಳಿಸಬೇಕಾಗುತ್ತಿತ್ತು; ಆದರೆ ಈಗ ನ್ಯಾಯಾಲಯದ ಮುಂದೆ ಇದರ ಹಿಂದಿನ ಕಾರಣವನ್ನು ವಿವರಿಸುವ ಅಗತ್ಯವಿಲ್ಲ. ರಾಷ್ಟ್ರಪತಿಗಳ ನಿರ್ಧಾರವನ್ನು ಯಾವುದೇ ನ್ಯಾಯಾಲಯದಲ್ಲಿ ಪ್ರಶ್ನಿಸುವಂತಿಲ್ಲ. ರಾಷ್ಟ್ರಪತಿಗಳ ತೀರ್ಮಾನವೇ ಅಂತಿಮವಾಗಿರುತ್ತದೆ. ರಾಷ್ಟ್ರದ ಯಾವುದೇ ನ್ಯಾಯಾಲಯದಲ್ಲಿ ರಾಷ್ಟ್ರಪತಿಗಳ ನಿರ್ಧಾರದ ಕುರಿತು ಯಾವುದೇ ಪ್ರಶ್ನೆಯನ್ನು ಮರುಪರಿಶೀಲನೆಗೆ ತೆಗೆದುಕೊಳ್ಳಲು ಬರುವುದಿಲ್ಲ. ಈ ಹಿಂದೆ ರಾಷ್ಟ್ರಪತಿಗಳು ತೆಗೆದುಕೊಳ್ಳುವ ನಿರ್ಧಾರವನ್ನು ಸಹ ಪ್ರಶ್ನಿಸಬಹುದು ಎಂದು ಸರ್ವೋಚ್ಚ ನ್ಯಾಯಾಲಯ ಅನೇಕ ಬಾರಿ ಸ್ಪಷ್ಟಪಡಿಸಿತ್ತು.