ಪಾಕಿಸ್ತಾನದ ಸಿಂಧ್ ನ ಆಸ್ಪತ್ರೆಯಲ್ಲಿ ಹಿಂದೂ ಮಹಿಳೆಯ ಮೇಲೆ ವೈದ್ಯರಿಂದ ಸಾಮೂಹಿಕ ಅತ್ಯಾಚಾರ

ಕರಾಚಿ (ಪಾಕಿಸ್ತಾನ) – ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಆಸ್ಪತ್ರೆಗೆ ಮೂತ್ರಪಿಂಡದ ಕಾಯಿಲೆಯ ಚಿಕಿತ್ಸೆಗಾಗಿ ದಾಖಲಾಗಿದ್ದ 23 ವರ್ಷದ ಹಿಂದೂ ಮಹಿಳೆಯ ಮೇಲೆ ಅಲ್ಲಿನ ಡಾಕ್ಟರರು ಗುಂಗಿನ ಔಷಧ ನೀಡಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಇದರಿಂದಾಗಿ ಸಂತ್ರಸ್ತೆಯ ಸ್ಥಿತಿ ಹದಗೆಟ್ಟಿದ್ದು, ಆಕೆಯನ್ನು ಹೈದರಾಬಾದ್ನ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮಹಿಳೆಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ. ಈ ಘಟನೆಯ ನಂತರ ಆರೋಪಿ ಆಧುನಿಕ ವೈದ್ಯರು ಇತರ ಸಿಬ್ಬಂದಿಗಳು ಪರಾರಿಯಾಗಿದ್ದಾರೆ. ಈ ಪ್ರಕರಣದಲ್ಲಿ ಸಂತ್ರಸ್ತ ಹಿಂದೂ ಮಹಿಳೆಯ ಸಂಬಂಧಿಕರು ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಿಂದ ಆಕ್ರೋಶಗೊಂಡ ಸಂತ್ರಸ್ತ ಮಹಿಳೆಯ ಕುಟುಂಬಸ್ಥರು, ‘ಅಲ್ಪಸಂಖ್ಯಾತ ಹಿಂದೂ ಸಮುದಾಯಕ್ಕೆ ಸೇರಿದ ಮಹಿಳೆಯರು ಪಾಕಿಸ್ತಾನದ ಆಸ್ಪತ್ರೆಗಳಲ್ಲಿಯೂ ಸುರಕ್ಷಿತವಾಗಿಲ್ಲ. ತಪ್ಪಿತಸ್ಥರ ವಿರುದ್ಧ ಸರಕಾರ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದ್ದಾರೆ.

ಸಂಪಾದಕೀಯ ನಿಲಿವು

ಭಾರತದಲ್ಲಿ ಅಲ್ಪಸಂಖ್ಯಾತರ ಮೇಲಿನ ತಥಾಕಥಿತ ದೌರ್ಜನ್ಯಗಳನ್ನು ದಾಖಲಿಸಿಕೊಂಡು ಭಾರತದ ಹಿಂದೂಗಳನ್ನು ತಾಲಿಬಾನಿಗಳು ಎಂದು ಕರೆಯುವ ಅಂತರರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಈಗ ಏಕೆ ಮೌನವಾಗಿದೆ ?