‘ಪರಿಹಾರ ಸಿಗಲು ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆಂತೆ !’ – ಸಚಿವ ಶಿವಾನಂದ ಪಾಟೀಲ್ ವಿವಾದಾತ್ಮಕ ಹೇಳಿಕೆ

ಹಾವೇರಿ – ಪರಿಹಾರ ಪಡೆಯಲು ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ರಾಜ್ಯದ ಕಬ್ಬು ಅಭಿವೃದ್ಧಿ ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಸಚಿವ ಶಿವಾನಂದ ಪಾಟೀಲ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸಚಿವರ ಈ ಹೇಳಿಕೆಗೆ ರಾಜ್ಯದ ಹಲವು ರೈತ ಸಂಘಟನೆಗಳು ತೀವ್ರ ಪ್ರತಿಕ್ರಿಯೆ ವ್ಯಕ್ತಪಡಿಸಿವೆ. ಪ್ರತಿಪಕ್ಷಗಳು ಕೂಡ ಕಾಂಗ್ರೆಸ್ ಸರಕಾರವನ್ನು ಟೀಕಿಸಿವೆ. ಪಾಟಿಲ್ ಅವರು ಇದಕ್ಕೂ ಮೊದಲು, ‘ಕರ್ನಾಟಕ ಸರಕಾರವು ಮೃತಪಟ್ಟ ರೈತರ ಕುಟುಂಬಗಳಿಗೆ ಪರಿಹಾರವನ್ನು ಹೆಚ್ಚಿಸಿರುವುದರಿಂದ ರಾಜ್ಯದಲ್ಲಿ ರೈತರ ಆತ್ಮಹತ್ಯೆಗಳು ವೇಗವಾಗಿ ಹೆಚ್ಚುತ್ತಿವೆ’, ಎಂದು ಹೇಳಿಕೆ ನೀಡಿದ್ದರು.

(ಸೌಜನ್ಯ – Public TV)

ರೈತರು, ಪಾಟೀಲ್ ಅವರನ್ನು ಕೂಡಲೇ ಸಚಿವ ಸಂಪುಟದಿಂದ ವಜಾಗೊಳಿಸಬೇಕೆಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಒತ್ತಾಯಿಸಿದ್ದಾರೆ. ಇಷ್ಟೆಲ್ಲಾ ಆದರೂ ಪಾಟಿಲ್ ಅವರು, ‘ನಾನು ರೈತರ ಭಾವನೆಗೆ ಧಕ್ಕೆ ತರುವ ಯಾವುದೇ ಹೇಳಿಕೆ ನೀಡಿಲ್ಲ’ ಎಂದು ಹೇಳಿದರು.

ಸಂಪಾದಕೀಯ ನಿಲುವು

ಇದು ರೈತರ ಪ್ರತಿ ಕಾಂಗ್ರಸ್ಸಿಗರ ಭಾವನೆ !