ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಂದ ಉದ್ಘಾಟನೆ!
ಅಯೋಧ್ಯೆ (ಉತ್ತರ ಪ್ರದೇಶ) – ಮುಂದಿನ ವರ್ಷ ಅಂದರೆ ಜನವರಿ 22, 2024 ರಂದು ಅಯೋಧ್ಯೆಯ ಶ್ರೀರಾಮನ ಜನ್ಮಭೂಮಿಯಲ್ಲಿ ನಿರ್ಮಿಸಲಾಗುತ್ತಿರುವ ಭವ್ಯವಾದ ಶ್ರೀರಾಮ ಮಂದಿರದ ಉದ್ಘಾಟನೆಯಾಗಲಿದೆಯೆಂದು ವರದಿಯಾಗಿದೆ. ಅದೇ ದಿನದಂದು ದೇವಸ್ಥಾನದಲ್ಲಿ ಭಗವಾನ ಶ್ರೀರಾಮನ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುತ್ತದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹಸ್ತದಿಂದ ದೇವಸ್ಥಾನ ಉದ್ಘಾಟಿಸಲಿದ್ದಾರೆ. ಪ್ರಾಣ ಪ್ರತಿಷ್ಠೆಗೆ ಒಂದು ವಾರ ಮೊದಲಿನಿಂದಲೂ ಧಾರ್ಮಿಕ ವಿಧಿವಿಧಾನಗಳು ಪ್ರಾರಂಭವಾಗಲಿದೆ. ಉದ್ಘಾಟನಾ ಕಾರ್ಯಕ್ರಮಕ್ಕಾಗಿ, ‘ಶ್ರೀರಾಮಮಂದಿರ ತೀರ್ಥ ಕ್ಷೇತ್ರ ನ್ಯಾಸ’ವು ದೇಶಾದ್ಯಂತವಿರುವ ಧರ್ಮಾಚಾರ್ಯರನ್ನು ಮತ್ತು ವಿಶ್ವದ 160 ದೇಶಗಳ ಪ್ರತಿನಿಧಿಗಳನ್ನು ಆಹ್ವಾನಿಸಲಿದೆ.
ಮುಂದಿನ ಜನವರಿಯಲ್ಲೇ ಅಯೋಧ್ಯೆ ರಾಮಮಂದಿರ ಉದ್ಘಾಟನೆ; ದಿನಾಂಕವೂ ನಿಗದಿ, ಇಲ್ಲಿದೆ ವಿವರ.. #Ayodhya #RamMandir #Inauguration #Modihttps://t.co/YT31GOrY1c
— Vijayavani (@VVani4U) September 9, 2023