ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಾರತ ವಿರೋಧಿ ಚಟುವಟಿಕೆಗಳನ್ನು ನಡೆಸುತ್ತಿರುವ ಕುಖ್ಯಾತ ಭಯೋತ್ಪಾದಕನ ಹತ್ಯೆ

ಇಸ್ಲಾಮಾಬಾದ್ – ಲಷ್ಕರ್-ಎ-ತೊಯ್ಬಾ ಮುಖ್ಯಸ್ಥ ಹಫೀಜ್ ಸಯೀದ್‌ನ ಆಪ್ತ ಸಹಾಯಕನಾಗಿದ್ದ ಅಬು ಖಾಸಿಮ್‌ನನ್ನು ಅಪರಿಚಿತ ಬಂದೂಕುಧಾರಿಗಳು ಹತ್ಯೆ ಮಾಡಿದ್ದಾರೆ. ಪಾಕ್ ಆಕ್ರಮಿತ ಕಾಶ್ಮೀರದ ರಾವಲ್‌ಕೋಟ್‌ನಲ್ಲಿರುವ ಮಸೀದಿಯೊಂದರಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಯಿತು. ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಭದ್ರತಾ ಪಡೆಗಳ ವಿರುದ್ಧ ಹಲವಾರು ದಾಳಿಗಳಲ್ಲಿ ಅಬು ಖಾಸಿಮ್ ಭಾಗಿಯಾಗಿದ್ದ. ಪಾಕಿಸ್ತಾನ ಆಕ್ರಮಿತ ಕಾಶ್ಮೀರದಿಂದ ಜಮ್ಮು ಮತ್ತು ಕಾಶ್ಮೀರಕ್ಕೆ ಲಷ್ಕರ್-ಎ-ತೊಯ್ಬಾದ ಭಯೋತ್ಪಾದಕರನ್ನು ಒಳನುಸುಳಲು ಈತ ಕೆಲಸ ಮಾಡುತ್ತಿದ್ದ. ಖಾಸಿಂ ಸ್ಥಳೀಯ ಯುವಕರನ್ನು ಲಷ್ಕರ್-ಎ-ತೊಯ್ಬಾಗೆ ಸೇರಿಸಿಕೊಳ್ಳುವಲ್ಲಿಯೂ ತೊಡಗಿಸಿಕೊಂಡಿದ್ದ. ಅದಕ್ಕಾಗಿ ಪಾಕಿಸ್ತಾನದಿಂದ ಹಣ ಪಡೆಯುತ್ತಿದ್ದ. ಭಾರತೀಯ ಭದ್ರತಾ ಏಜೆನ್ಸಿಗಳು ಹಲವು ದಿನಗಳಿಂದ ಅಬು ಖಾಸಿಮ್ ನನ್ನು ಹುಡುಕುತ್ತಿದ್ದವು.