ಶ್ರೀ ಗಣೇಶನ ಪೂಜೆಯಲ್ಲಿ ಉಪಯೋಗಿಸುವ ವಿಶಿಷ್ಟ ವಸ್ತು – ದೂರ್ವೆ

ಗಣೇಶನ ಪೂಜೆಯಲ್ಲಿ ದೂರ್ವೆಗೆ (ಗರಿಕೆ) ವಿಶೇಷ ಮಹತ್ವವಿದೆ.

ಅ. ವ್ಯುತ್ಪತ್ತಿ ಮತ್ತು ಅರ್ಥ

ದೂಃಅವಮ್‌ ಹೀಗೆ ದೂರ್ವೆ ಶಬ್ದವು ನಿರ್ಮಾಣವಾಗಿದೆ. ‘ದೂಃ’ ಅಂದರೆ ದೂರದಲ್ಲಿ ಇರುವುದು ಮತ್ತು ‘ಅವಮ್’ ಅಂದರೆ ಯಾವುದು ಹತ್ತಿರ ತರುತ್ತದೆಯೋ ಅದು. ದೂರದಲ್ಲಿರುವ ಶ್ರೀ ಗಣೇಶನ ಪವಿತ್ರಕ ಗಳನ್ನು ಯಾವುದು ಹತ್ತಿರ ತರುತ್ತದೆಯೋ, ಅದೇ ದೂರ್ವೆ.

ಆ. ಶ್ರೀ ಗಣಪತಿಗೆ ದೂರ್ವೆಯನ್ನು ಅರ್ಪಿಸುವುದರ ಕಾರಣಗಳು

ಆ ೧. ಪೌರಾಣಿಕ ಕಾರಣ : ಗಣಪತಿಯು ತನ್ನನ್ನು ಮದುವೆಯಾಗಬೇಕೆಂದು ಓರ್ವ ಅಪ್ಸರೆಯು ಧ್ಯಾನಮಗ್ನ ನಾಗಿದ್ದ ಗಣಪತಿಯ ಧ್ಯಾನಭಂಗ ಮಾಡಿದಳು ಗಣಪತಿಯು ವಿವಾಹಕ್ಕೆ ನಿರಾಕರಿಸಿದ್ದರಿಂದ ಅಪ್ಸರೆಯು ಗಣಪತಿಗೆ ಶಾಪ ಕೊಟ್ಟಳು. ಇದರಿಂದ ಗಣಪತಿಯ ತಲೆಯಲ್ಲಿ ಉಷ್ಣತೆಯ ಅರಿವಾಗತೊಡಗಿತು. ಇದÀನ್ನು ನಿವಾರಿಸಲು ಗಣಪತಿಯು ತಲೆಯ ಮೇಲೆ ದೂರ್ವೆಗಳನ್ನು ಧರಿಸಿದನು. ಈ ಕಾರಣಕ್ಕಾಗಿ ಗಣಪತಿಗೆ ದೂರ್ವೆಗಳನ್ನು ಅರ್ಪಿಸುತ್ತಾರೆ.’

ಆ ೨. ಆಯುರ್ವೇದಕ್ಕನುಸಾರ ಕಾರಣ : ಆಯುರ್ವೇದವು ಸಹ ‘ದೂರ್ವೆಯ ರಸದಿಂದ ಶರೀರದ ಉಷ್ಣತೆಯು ಕಡಿಮೆ ಯಾಗುತ್ತದೆ’ ಎಂದು ಹೇಳುತ್ತದೆ.

ಆ ೩. ಆಧ್ಯಾತ್ಮಿಕ ಕಾರಣ : ನಾವು ಪೂಜಿಸುವ ಮೂರ್ತಿಯಲ್ಲಿ ದೇವತ್ವವು ಹೆಚ್ಚಿಗೆ ಬಂದು ನಮಗೆ ಚೈತನ್ಯದ ಲಾಭವಾಗಬೇಕು ಎಂಬುದು ಪೂಜೆಯ ಒಂದು ಉದ್ದೇಶವಾಗಿರುತ್ತದೆ. ಆದುದರಿಂದ ಆಯಾಯ ದೇವತೆಗಳ ತತ್ತ್ವವನ್ನು ಹೆಚ್ಚೆಚ್ಚು ಆಕರ್ಷಿಸುವಂತಹ ವಸ್ತುಗಳನ್ನು ದೇವತೆಗಳಿಗೆ ಅರ್ಪಿಸುವುದು ಸೂಕ್ತವಾಗಿದೆ. ದೂರ್ವೆಯಲ್ಲಿ ಗಣೇಶತತ್ತ್ವವನ್ನು ಆಕರ್ಷಿಸುವ ಕ್ಷಮತೆಯು ಎಲ್ಲಕ್ಕಿಂತ ಹೆಚ್ಚಿಗೆ ಇರುವುದರಿಂದ ಗಣಪತಿಗೆ ದೂರ್ವೆಗಳನ್ನು ಅರ್ಪಿಸುತ್ತಾರೆ.

೧ ಇ. ದೂರ್ವೆ ಹೇಗಿರಬೇಕು ? : ಗಣಪತಿಗೆ ಎಳೆಯ ದೂರ್ವೆ ಗಳನ್ನು ಅರ್ಪಿಸಬೇಕು. ಎಳೆಯ ದೂರ್ವೆಗೆ ‘ಬಾಲ ತೃಣಮ್’ ಎನ್ನುತ್ತಾರೆ. ಬಲಿತಿರುವ ದೂರ್ವೆಯು ಒಂದು ರೀತಿಯ ಹುಲ್ಲಿ ನಂತೆಯೇ ಇರುತ್ತದೆ. ದೂರ್ವೆಗಳಿಗೆ ೩, ೫, ೭ ಹೀಗೆ ಬೆಸ ಸಂಖ್ಯೆಯ ಗರಿಗಳಿರಬೇಕು.

(ಆಧಾರ : ಸನಾತನ ನಿರ್ಮಿತ ಗ್ರಂಥ ‘ಶ್ರೀ ಗಣಪತಿ’)