ಯುನೆಸ್ಕೋ ಪಟ್ಟಿಗೆ ಸೇರಿದ ಕರ್ನಾಟಕದ ಹೊಯ್ಸಳ ದೇವಾಲಯಗಳು

ಬೆಂಗಳೂರು –  ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಹಾಸನ ಜಿಲ್ಲೆ ಬೇಲೂರು ಮತ್ತು ಹಳೆಬೀಡಿನಲ್ಲಿರುವ ಹಾಗೂ ಮೈಸೂರು ಜಿಲ್ಲೆ ಸೋಮನಾಥಪುರದಲ್ಲಿರುವ ಹೊಯ್ಸಳ ದೇವಾಲಯಗಳು ಸ್ಥಾನ ಪಡೆದಿವೆ. ಸೋಮನಾಥಪುದ ಕೇಶವ ದೇವಸ್ಥಾನ, ಬೇಲೂರಿನ ಚನ್ನಕೇಶವ ದೇವಸ್ಥಾನ ಹಾಗೂ ಹಳೆಬೀಡಿನ ಹೊಯ್ಸಳ ದೇವಸ್ಥಾನಗಳು ಕಲೆ, ವಾಸ್ತುಶಿಲ್ಪ, ಸಂಸ್ಕೃತಿಯ ಪ್ರತೀಕವಾಗಿದ್ದು, ಪ್ರಸ್ತುತ ಮೂರು ಸ್ಮಾರಕಗಳು ಯುನೆಸ್ಕೋ ತಾಣವಾಗಿ ಘೋಷಣೆಯಾಗಿವೆ. 12-13 ನೇ ಶತಮಾನದಲ್ಲಿ ನಿರ್ಮಿಸಲಾದ ಹೊಯ್ಸಳರ ಶೈಲಿಯ ಶಿಲ್ಪಕಲಾ ಶೈಲಿಯ ದೇಗುಲಗಳು, ಬೇಲೂರು, ಹಳೇಬೀಡು ಮತ್ತು ಸೋಮನಾಥಪುರದ ಮೂರು ದೇವಾಲಯಗಳಿಂದ ಇಲ್ಲಿ ಪ್ರತಿನಿಧಿಸಲ್ಪಟ್ಟಿದೆ.