ಶಿಕ್ಷಣ ಅಧಿಕಾರಿಗಳಿಂದ ವಿಚಾರಣೆಗೆ ಆದೇಶ !

ನಾಸಿಕ – ಜಿಲ್ಲೆಯ ದಿಂಡೋರಿ ತಾಲೂಕಿನ ವಲಖೇಡ ಗ್ರಾಮದಲ್ಲಿ ಒಂದು ಗಣೇಶೋತ್ಸವ ಮಂಡಳಿಯು ಜಿಲ್ಲಾ ಪರಿಷತ್ತಿನ ಶಾಲಾ ಆವರಣದಲ್ಲಿ ಲಾವಣಿ ನರ್ತಕಿ ಗೌತಮಿ ಪಾಟೀಲ್ ಇವಳ ಅಶ್ಲೀಲ ನೃತ್ಯ ಕಾರ್ಯಕ್ರಮವನ್ನು ಆಯೋಜಿಸಿತ್ತು. ಈ ಕಾರ್ಯಕ್ರಮವು ಬಹಳ ಜನದಟ್ಟಣೆಯಿಂದ ಕೂಡಿತ್ತು. ಶಾಲಾ ಆವರಣದಲ್ಲಿ ಕಾರ್ಯಕ್ರಮ ಆಯೋಜಿಸಿರುವ ಕುರಿತು ಸಮೂಹವು ಶಿಕ್ಷಣಾಧಿಕಾರಿಯು ತನಿಖೆಗೆ ಆದೇಶಿಸಿದ್ದಾರೆ.
ಶಿಕ್ಷಣ ಸಚಿವ ದೀಪಕ್ ಕೇಸರಕರ ಮಾತನಾಡಿ, ಜಿಲ್ಲಾ ಪರಿಷತ್ತಿನ ಶಾಲೆಯಲ್ಲಿ ಇಂತಹ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾತ್ರ ಇಲ್ಲಿ ನಡೆಸಬಹುದು; ಆದರೆ ಸಾಂಸ್ಕೃತಿಕ ಕಾರ್ಯಕ್ರಮಗಳು ಹೇಗಿರಬೇಕು ಎನ್ನುವುದರ ಅರಿವು ಹೊಂದಿರುವುದು ಮಹತ್ವದ್ದಾಗಿದೆ. ಇಂತಹ ಕಾರ್ಯಕ್ರಮವೇನಾದರೂ ನಡೆದಿದ್ದರೆ ಆಘಾತಕಾರಿ ವಿಷಯವಾಗಿದೆ. ಸ್ಥಳೀಯ ಸಮೂಹ ಶಿಕ್ಷಣ ಅಧಿಕಾರಿಗಳು ವಿಚಾರಣೆ ಪ್ರಾರಂಭಿಸಿದ್ದಾರೆ. ವಿಚಾರಣೆಯ ವರದಿಯನ್ನು ಸಂಬಂಧಿಸಿರುವ ಮೇಲಾಧಿಕಾರಿಗಳಿಗೆ ಕಳುಹಿಸಿ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!