ಪಾಕಿಸ್ತಾನದಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಭಾರತದ ಕೈವಾಡ; ಪಾಕಿಸ್ತಾನದ ಗೃಹ ಸಚಿವರ ಆರೋಪ !

ಇಸ್ಲಾಮಾಬಾದ್ (ಪಾಕಿಸ್ತಾನ) – ಪಾಕಿಸ್ತಾನದಲ್ಲಿ ಸೆಪ್ಟೆಂಬರ್ 29 ರಂದು ನಡೆದ 2 ಬಾಂಬ್ ಸ್ಫೋಟಗಳ ಪ್ರಕರಣದಲ್ಲಿ ಪಾಕಿಸ್ತಾನವು ಭಾರತವನ್ನು ದೂಷಿಸಿದೆ. ಈ ಸ್ಫೋಟಗಳ ಹಿಂದೆ ಭಾರತದ ಗುಪ್ತಚರ ಸಂಸ್ಥೆ ‘ರಾ’ ಕೈವಾಡವಿದೆ ಎಂದು ಪಾಕಿಸ್ತಾನದ ಗೃಹಸಚಿವ ಸರಫರಾಜ ಬುಗತಿ ಹೇಳಿದ್ದಾರೆ. ಈ ಸ್ಫೋಟಗಳಲ್ಲಿ 65 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರೆ, ದೊಡ್ಡ ಸಂಖ್ಯೆಯಲ್ಲಿ ಜನರು ಗಾಯಗೊಂಡಿದ್ದರು. ಬಲೂಚಿಸ್ತಾನದ ಮಸ್ತುಂಗ್‌ನಲ್ಲಿರುವ ಮದೀನಾ ಮಸೀದಿ ಬಳಿ ಸ್ಫೋಟ ಸಂಭವಿಸಿದ ಕೆಲವೇ ಗಂಟೆಗಳ ಅಂತರದಲ್ಲಿಯೇ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಹಂಗು ಪಟ್ಟಣದ ಮಸೀದಿಯಲ್ಲಿ ಮತ್ತೊಂದು ಸ್ಫೋಟ ಸಂಭವಿಸಿತ್ತು.
ಪಾಕಿಸ್ತಾನದ ಗೃಹ ಸಚಿವ ಬುಗತಿ ಮಾತನಾಡಿ, ಈ ಬಾಂಬ್ ಸ್ಫೋಟಗಳಲ್ಲಿ ಭಾಗಿಯಾಗಿರುವವರಿಗೆ ಪಾಕಿಸ್ತಾನ ಸೇನೆ ಮತ್ತು ಇತರ ಎಲ್ಲಾ ಸಂಸ್ಥೆಗಳಿಂದ ತಕ್ಕ ಪ್ರತ್ಯುತ್ತರ ನೀಡಲಾಗುವುದು ಎಂದು ಹೇಳಿದ್ದಾರೆ.

ಸಂಪಾದಕೀಯ ನಿಲುವು

ಪಾಕಿಸ್ತಾನ ಏನು ಬಿತ್ತಿದೆಯೋ, ಅದನ್ನೆ ಬೆಳೆಯುತ್ತಿರುವಾಗ ಭಾರತದ ವಿರುದ್ಧ ಇಂತಹ ಆರೋಪಗಳನ್ನು ಮಾಡಲು ಪಾಕಿಸ್ತಾನಕ್ಕೆ ನಾಚಿಕೆಯಾಗುವುದಿಲ್ಲವೇ !