
ಬೆಂಗಳೂರು – ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ “ಬಾಲಾಜಿ ಕ್ರಾಕರ್ಸ್” ಈ ಪಟಾಕಿ ಅಂಗಡಿಯಲ್ಲಿ ಸಂಭವಿಸಿದ ಬೆಂಕಿಯಲ್ಲಿ 14 ಜನರು ಸಾವನ್ನಪ್ಪಿದ್ದಾರೆ. ಅಕ್ಟೋಬರ್ 7 ರಂದು ಸಂಜೆ ಸುಮಾರು 4.30 ರ ಸಮಯದಲ್ಲಿ ಈ ಘಟನೆ ನಡೆದಿದೆ. ಈ ಸಂದರ್ಭದಲ್ಲಿ ಅಂಗಡಿಯ ಮಾಲೀಕ ಹಾಗೂ ಆತನ ಪುತ್ರನ ವಿರುದ್ಧ ದೂರು ದಾಖಲಿಸಿ ಬಂಧಿಸಲಾಗಿದೆ. ಈ ಅಂಗಡಿಯಲ್ಲಿ ದಸರಾ ಮತ್ತು ದೀಪಾವಳಿಗಾಗಿ ಪಟಾಕಿಯನ್ನು ಸಂಗ್ರಹಿಸಲಾಗುತ್ತಿತ್ತು. ವಾಹನದಿಂದ ಪೆಟ್ಟಿಗೆಯನ್ನು ಇಳಿಸುವಾಗ ಬೆಂಕಿ ಹತ್ತಿಕೊಂಡಿತು. ಸ್ವಲ್ಪ ಸಮಯದಲ್ಲಿಯೇ ಅಂಗಡಿ ಮತ್ತು ಗೋದಾಮು ಬೆಂಕಿಗೆ ಆಹುತಿಯಾಯಿತು. ಬೆಂಕಿ ಹತ್ತಿಕೊಂಡಾಗ 35 ಜನರು ಕೆಲಸ ಮಾಡುತ್ತಿದ್ದರು.
ಬೆಂಗಳೂರಿನ ಆನೇಕಲ್ ಸಮೀಪದ ಅತ್ತಿಬೆಲೆಯ ಪಟಾಕಿ ಗೋದಾಮಿನಲ್ಲಿ ಅಗ್ನಿ ದುರಂತ ಸಂಭವಿಸಿ 14 ಜನ ದುರ್ಮರಣಕ್ಕೆ ತುತ್ತಾದ ಸಂಗತಿ ತಿಳಿದು ಅತೀವ ದುಃಖವಾಯಿತು.
ದುರಂತದಲ್ಲಿ ಮಡಿದವರ ಕುಟುಂಬಗಳಿಗೆ ನನ್ನ ಸಂತಾಪಗಳನ್ನು ತಿಳಿಸುತ್ತೇನೆ. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳುವಂತಾಗಲಿ.
ಸಂತ್ರಸ್ತರ ಕುಟುಂಬಗಳಿಗೆ ರೂ. 5 ಲಕ್ಷ ಪರಿಹಾರವನ್ನು… pic.twitter.com/dyFWHL0GCy— M B Patil (@MBPatil) October 8, 2023
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!