ದೇವಿಮಾತೆಯ ನಿತ್ಯ ಉಪಾಸನೆ ಹೇಗೆ ಮಾಡಬೇಕು ?
ಕುಂಕುಮಾರ್ಚನೆಯನ್ನು ಮಾಡುವಾಗ ಪ್ರಥಮವಾಗಿ ದೇವಿಯ ಆವಾಹನೆಯನ್ನು ಮಾಡಿ ಪೂಜಿಸುತ್ತಾರೆ. ನಂತರ ದೇವಿಯ ಹೆಸರನ್ನು ಉಚ್ಚರಿಸುತ್ತಾ ದೇವಿಯ ಮೂರ್ತಿಯ ಮೇಲೆ ಕುಂಕುಮವನ್ನು ಅರ್ಪಿಸುತ್ತಾರೆ. ದೇವಿಯ ಚರಣಗಳಿಂದ ಆರಂಭಿಸಿ ಶಿರದವರೆಗೆ ಏರಿಸಿ, ಅವರನ್ನು ಕುಂಕುಮದಿಂದ ಆಚ್ಛಾದಿಸುತ್ತಾರೆ. ಕುಂಕುಮಾರ್ಚನೆಯು ಪೂರ್ಣವಾದ ನಂತರ ದೇವಿಗೆ ಆರತಿಯನ್ನು ಬೆಳಗುತ್ತಾರೆ.