ಭಾರತೀಯ ಸಂಸ್ಕೃತಿಯಂತೆ ಜನವರಿ ಒಂದಲ್ಲ ಯುಗಾದಿಯೇ ಹೊಸ ವರ್ಷ !
ಜನವರಿ ೧ ರಂದು ವರ್ಷಾರಂಭವನ್ನು ಏಕೆ ಮಾಡಬೇಕು ಎನ್ನುವುದಕ್ಕೆ ಯಾವ ಕಾರಣವೂ ಇಲ್ಲ. ತದ್ವಿರುದ್ಧ ಚೈತ್ರ ಶುಕ್ಲ ಪಾಡ್ಯದಂದು ವರ್ಷಾರಂಭವನ್ನು ಮಾಡಲು ನೈಸರ್ಗಿಕ, ಐತಿಹಾಸಿಕ ಮತ್ತು ಆಧ್ಯಾತ್ಮಿಕ ಕಾರಣಗಳಿವೆ. ಯುಗಾದಿ ಪಾಡ್ಯದಂದು ಪ್ರಾರಂಭವಾಗುವ ಹೊಸ ವರ್ಷದ ಕಾಲಚಕ್ರವು ವಿಶ್ವದ ಉತ್ಪತ್ತಿಯ ಕಾಲಚಕ್ರಕ್ಕೆ ಸಂಬಂಧಿಸಿದೆ. ಆದುದರಿಂದ ಸೃಷ್ಟಿಯು ನವಚೇತನದಿಂದ ತುಂಬಿರುತ್ತದೆ.