ಅಕ್ಷಯ ತದಿಗೆಯ ಮಹತ್ವ ಹಾಗೂ ಅದನ್ನು ಆಚರಿಸುವ ಪದ್ಧತಿ
ಪ್ರಸ್ತುತ ಲೇಖನದಲ್ಲಿ ಹೇಳಲಾದ ಅಧ್ಯಾತ್ಮಶಾಸ್ತ್ರವು, ಸರ್ವಸಾಮಾನ್ಯ ಕಾಲದಲ್ಲಿ ಪಾಲಿಸಬೇಕಾದ ಧರ್ಮದಲ್ಲಿ ಹೇಳಲಾದ ಶಾಸ್ತ್ರವಾಗಿದೆ. ಎಲ್ಲವೂ ಅನುಕೂಲಕರವಾಗಿದ್ದು ಧರ್ಮದಲ್ಲಿ ಹೇಳಿದಂತೆ ವರ್ತಿಸಬಹುದು, ಇದಕ್ಕೆ ‘ಸಂಪತ್ಕಾಲ’ ಎನ್ನಬಹುದು. ಇಲ್ಲಿ ಮಹತ್ವವಾದ ಅಂಶವೇನೆಂದರೆ, ಹಿಂದೂ ಧರ್ಮವು ಆಪತ್ಕಾಲಕ್ಕಾಗಿ ಧರ್ಮಾಚರಣೆಯಲ್ಲಿ ಕೆಲವು ಪರ್ಯಾಯಗಳನ್ನು ಹೇಳಿದೆ.