ವೀಡಿಯೋಗಳನ್ನು ವೀಕ್ಷಿಸಿ : ಕಳೆದ ೧೦೦೦ ವರ್ಷಗಳಲ್ಲೇ ಗರಿಷ್ಠ ಮಳೆ : ಚೀನಾದಲ್ಲಿ ಲಕ್ಷಾಂತರ ಜನರು ನಿರಾಶ್ರಿತರು !

ಇಲ್ಲಿಯ ಹವಾಮಾನ ಇಲಾಖೆಯ ಪ್ರಕಾರ ಹೆನಾನ್ ಪ್ರಾಂತ್ಯದಲ್ಲಿ ಕಳೆದ ೧೦೦೦ ವರ್ಷಗಳಲ್ಲಿ ಅತಿ ಹೆಚ್ಚು ಮಳೆಯಾಗಿದೆ. ವಿದೇಶಿ ಸುದ್ದಿ ಜಾಲತಾಣ ‘ಟೆಲಿಗ್ರಾಫ್’ನ ಮಾಹಿತಿಯ ಪ್ರಕಾರ, ಇದುವರೆಗೆ ೨೫ ಜನರು ಸಾವನ್ನಪ್ಪಿದ್ದಾರೆ ಮತ್ತು ಲಕ್ಷಾಂತರ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

ಲಡಾಖ್ ಗಡಿಯಲ್ಲಿ ಬೀಡುಬಿಟ್ಟಿದ್ದ ಶೇಕಡಾ ೯೦ ರಷ್ಟು ಸೈನಿಕರು ಹೆಪ್ಪುಗಟ್ಟುವಂತಹ ಚಳಿಯಿಂದ ಅನಾರೋಗ್ಯಪೀಡಿತರಾದ ಕಾರಣ ಅವರನ್ನು ವಾಪಾಸು ಕರೆಸಿಕೊಂಡ ಚೀನಾ

ಹೆಪ್ಪುಗಟ್ಟುವಂತಹ ಚಳಿಯಿಂದ ಲಡಾಖ್ ಗಡಿಯಲ್ಲಿ ಬೀಡುಬಿಟ್ಟಿರುವ ಚೀನಾದ ಶೇ. ೯೦ ರಷ್ಟು ಸೈನಿಕರನ್ನು ವಾಪಸ್ ಕರೆಸಿಕೊಳ್ಳಲಾಗಿದೆ. ಕಳೆದ ವರ್ಷ ಗಾಲ್ವಾನ್ ಕಣಿವೆಯಲ್ಲಿ ಸಂಘರ್ಷದ ನಂತರ ಚೀನಾ ೫೦೦೦೦ ಕ್ಕೂ ಹೆಚ್ಚು ಸೈನಿಕರನ್ನು ಅಲ್ಲಿ ನಿಯೋಜಿಸಿತ್ತು. ವಾಪಸ ಕರೆಸಲಾದ ಸೈನಿಕರ ಜಾಗದಲ್ಲಿ ಇತರ ಸ್ಥಳಗಳಲ್ಲಿ ಬೀಡುಬಿಟ್ಟಿರುವ ಸೈನಿಕರನ್ನು ಲಡಾಖ್ ಗಡಿಗೆ ಕರೆತರಲಾಗಿದೆ.

ಚೀನಾದಿಂದ ಗಲ್ವಾನ್ ಕಣಿವೆಯಲ್ಲಿ ಚೀನಾದ ಸೈನಿಕರ ಸಾವಿನ ಸಂಖ್ಯೆಯ ಮೇಲೆ ಸಂದೇಹ ಪಟ್ಟಿದ್ದ ಬ್ಲಾಗರ್ ನ ಬಂಧನ

ಕಳೆದ ವರ್ಷ ಲಡಾಖ್‍ನ ಗಲ್ವಾನ್ ಕಣಿವೆಯಲ್ಲಿ ಭಾರತೀಯ ಮತ್ತು ಚೀನಾದ ಸೈನಿಕರ ನಡುವಿನ ಘರ್ಷಣೆಯಲ್ಲಿ ಮೃತಪಟ್ಟ ಚೀನಾದ ಸೈನಿಕರ ಸಂಖ್ಯೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಬ್ಲಾಗರ್ ನನ್ನು ಚೀನಾ ಬಂಧಿಸಿದೆ. ಆತನಿಗೆ ೮ ತಿಂಗಳು ಶಿಕ್ಷೆ ವಿಧಿಸಲಾಗಿದೆ.

ಚೀನಾದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು

ಕೊರೊನಾ ಆರಂಭವಾದ ಚೀನಾದಲ್ಲಿ ಕೊರೋನಾ ಸೋಂಕು ಮತ್ತೆ ಹರಡುತ್ತಿದೆ. ಕೊರೋನಾ ರೋಗಿಗಳು ಮತ್ತೆ ಕಾಣಿಸಿಕೊಂಡಿದ್ದರಿಂದ ಚೀನಾದ ಗ್ವಾಂಗದೊಂಗ ಪ್ರದೇಶದಲ್ಲಿ ಹಲವಾರು ನಿರ್ಬಂಧಗಳನ್ನು ಹೇರಲಾಗಿದೆ.

ಚೀನಾದ ಸೇನೆಯಿಂದ ಟಿಬೆಟ್‍ನಲ್ಲಿ ರಹಸ್ಯವಾಗಿ ಹೊಸ ಕಮಾಂಡರ್ ನ ನೇಮಕ

ಚೀನಾ ವಿಶ್ವಾಸದ್ರೋಹಿ ಆಗಿರುವುದರಿಂದ, ಭಾರತವು ಅದರ ಪ್ರತಿಯೊಂದು ಕೃತಿಯ ಮೇಲೆ ನಿಗಾವಿಟ್ಟು ಜಾಗರೂಕರಾಗಿರುವುದು ಯೋಗ್ಯವಾಗಿದೆ ! ಚೀನಾವು ಧೂರ್ತತನ ತೋರಿಸಿದರೆ, ಅದಕ್ಕೆ ಪ್ರತ್ಯುತ್ತರ ನೀಡಲು ಭಾರತವು ಸಿದ್ಧವಾಗಿರಬೇಕು !

ಚೀನಾವು ತೈವಾನ್ ಮೇಲೆ ಆಕ್ರಮಣ ಮಾಡುವ ಸಾಧ್ಯತೆಯನ್ನು ಮನಗಂಡು ಯುದ್ಧಕ್ಕೆ ಸಿದ್ಧತೆ ನಡೆಸುತ್ತಿರುವ ಆಸ್ಟ್ರೇಲಿಯಾ !

ಮುಂದಿನ ಐದು ವರ್ಷಗಳಲ್ಲಿ ಚೀನಾವು ತೈವಾನ್ ಮೇಲೆ ಆಕ್ರಮಣ ಮಾಡುವ ಸಾಧ್ಯತೆಯಿದೆ ಎಂದು ಆಸ್ಟ್ರೇಲಿಯಾವು ಚೀನಾದೊಂದಿಗೆ ಯುದ್ಧಕ್ಕೆ ಸಿದ್ಧತೆ ನಡೆಸಿದೆ. ಇದಕ್ಕಾಗಿ ಒಂದು ರಣತಂತ್ರವನ್ನು ರೂಪಿಸಲಾಗುತ್ತಿದೆ. ಇದೇ ವಾರದಲ್ಲಿ ಚೀನಾವು ೨೫ ಯುದ್ಧವಿಮಾನಗಳ ಒಂದು ದಂಡನ್ನು ತೈವಾನ್‌ನ ವಾಯುಪ್ರದೇಶಕ್ಕೆ ಕಳುಹಿಸಿತ್ತು.