ಬೆಂಗಳೂರಿನ ಸ್ಮಶಾನದ ಹೊರಗೆ ‘ಹೌಸ್ ಫುಲ್’ ಫಲಕ !

ಭಾರತದಲ್ಲಿ ಇಂತಹ ಪರಿಸ್ಥಿತಿ ಬರಬಹುದು ಎಂಬುದು ಯಾರೂ ನಿರೀಕ್ಷಿಸಿರಲಿಲ್ಲ; ಆದರೆ ಆಪತ್ಕಾಲ ಬರುತ್ತದೆ, ಎಂದು ದ್ರಷ್ಟಾರರು, ಸಂತರು ಇತ್ಯಾದಿಗಳು ಹೇಳುತ್ತಿದ್ದರು, ಅದು ಅಂತಹ ಘಟನೆಗಳಲ್ಲಿ ಕಂಡುಬರುತ್ತದೆ !

ಚಾಮರಾಜನಗರದಲ್ಲಿ ಆಮ್ಲಜನಕದ ವಿತರಣೆಯ ವಿಳಂಬದಿಂದಾಗಿ ಆಸ್ಪತ್ರೆಯಲ್ಲಿ ೨೪ ಕೊರೋನಾ ಪೀಡಿತ ರೋಗಿಗಳ ಸಾವು !

ರಾಜ್ಯದ ಚಾಮರಾಜನಗರದ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದಾಗಿ ೨೪ ಕೊರೋನಾ ಪೀಡಿತ ರೋಗಿಗಳು ಸಾವನ್ನಪ್ಪಿದ್ದಾರೆ. ಈ ಘಟನೆಯ ನಂತರ ೨೫೦ ಆಕ್ಸಿಜನ್ ಸಿಲಿಂಡರ್‌ಗಳನ್ನು ಮೈಸೂರಿನಿಂದ ಚಾಮರಾಜನಗರಕ್ಕೆ ಕಳುಹಿಸಲಾಗಿದೆ.

ಆಹಾರ ಧಾನ್ಯಗಳ ಪೂರೈಕೆಯ ವಿಳಂಬದ ಬಗ್ಗೆ ಪ್ರಶ್ನಿಸಿದ ರೈತನಿಗೆ ‘ಹೋಗಿ ಸಾಯಿರಿ’ ಎಂದು ಉದ್ಧಟತನದಿಂದ ಉತ್ತರಿಸಿದ ಕರ್ನಾಟಕದ ಸಚಿವ !

ಇಂತಹ ಉದ್ಧಟತನದ ಉತ್ತರವನ್ನು ನೀಡುವುದು ಇದು ಪರಾಕಾಷ್ಠೆಯ ಸಂವೇದನಾಶೂನ್ಯತೆಯಾಗಿದೆ. ಕರ್ನಾಟಕದ ಆಡಳಿತಾರೂಢ ಬಿಜೆಪಿ ಸರಕಾರವು ಇಂತಹವರ ವಿರುದ್ಧ ಕ್ರಮ ಕೈಗೊಳ್ಳುವುದು ಅಪೇಕ್ಷಿತವಿದೆ !

ಅಂತ್ಯ ಸಂಸ್ಕಾರಕ್ಕಾಗಿ ಸಾಲ ಮಾಡಿ ಸ್ಮಶಾನಭೂಮಿಯ ಸಿಬ್ಬಂದಿಗೆ ಲಂಚ ಕೊಟ್ಟ ಮಹಿಳೆ

ಬೀದಿ ಬೀದಿ ವ್ಯಾಪಾರ ಮಾಡುವ ರಾಧಮ್ಮ ಹೆಸರಿನ ಮಹಿಳೆ ಬಡ್ಡಿ ಸಹಿತ ಸಾಲ ತಂದು ಆಯಂಬುಲೆನ್ಸ್‌ಗೆ ೫ ಸಾವಿರ ಹಾಗೂ ಚಿತಾಗಾರ ಸಿಬ್ಬಂದಿಗೆ ೩ ಸಾವಿರ ನೀಡಿ ಮೃತ ಸೋಂಕಿತನ ಅಂತ್ಯಕ್ರಿಯೆ ನೆರವೇರಿಸಿದ ದಾರುಣ ಘಟನೆಯು ಶುಕ್ರವಾರ ಯಲಹಂಕದ ಮೇಡಿ ಚಿತಾಗಾರದಲ್ಲಿ ನಡೆದಿದೆ.

ಆಸ್ಪತ್ರೆಯಲ್ಲಿ ಕೊರೋನಾ ರೋಗಿಗಳ ಚಿಕಿತ್ಸೆಯಲ್ಲಿ ನಿರ್ಲಕ್ಷ್ಯವಾಗುತ್ತಿದೆ ಎಂದು ದೂರು ನೀಡಿದ್ದಕ್ಕಾಗಿ ಸೈನಿಕನಿಗೆ ಥಳಿತ

ತನ್ನ ತಾಯಿಗೆ ಸರಿಯಾಗಿ ಚಿಕಿತ್ಸೆ ನೀಡಿಲ್ಲ ಎಂದು ಆರೋಪಿಸಿರುವ ಸೈನಿಕ ಶ್ರೀನಿವಾಸ ಅವರನ್ನು ಶ್ರೀನಿವಾಸಪುರ ಸರಕಾರಿ ಆಸ್ಪತ್ರೆಯ ಆವರಣದಲ್ಲಿಯೇ ಸಿಬ್ಬಂದಿಗಳು ಹೊಡೆದಿದ್ದಾರೆ. ಅದರಲ್ಲೂ ವಿಶೇಷವೆಂದರೆ ಈ ಪೊಲೀಸರ ಸಮ್ಮುಖದಲ್ಲಿ ಈ ಹಲ್ಲೆಯು ನಡೆದಿದೆ.

ಪಿಪಿಇ ಕಿಟ್ ಧರಿಸಿ ಕೋವಿಡ್ ಆಸ್ಪತ್ರೆಗೆ ತೆರಳಿ ಸೋಂಕಿತರ ಆರೋಗ್ಯ ವಿಚಾರಿಸಿದ ಆದಿಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ

ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್ ನಲ್ಲಿರುವ ಶ್ರೀ ಆದಿಚುಂಚನಗಿರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿತರನ್ನು ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಪಿಪಿಇ ಕಿಟ್ ಧರಿಸಿಕೊಂಡು ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿದ್ದಾರೆ.

ಬಾಗಲಕೋಟೆಯಲ್ಲಿ ಲಂಚ ಸಂಗ್ರಹದ ಪ್ರಕರಣದಲ್ಲಿ ಆರೋಗ್ಯಾಧಿಕಾರಿಯ ಬಂಧನ

ಬಾಗಲಕೋಟೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಥಮ ದರ್ಜೆ ಸಹಾಯಕ ಮಹಾಂತೇಶ ನಿಡಸನೂರ ಇವರನ್ನು ಲಂಚ ಸಂಗ್ರಹದ ಪ್ರಕರಣದಲ್ಲಿ ಬಂಧಿಸಲಾಗಿದೆ. ಇವರು ಜಿಲ್ಲೆಯಲ್ಲಿರುವ ಆರೋಗ್ಯ ಇಲಾಖೆಯ ವಿವಿಧ ಕಚೇರಿಗಳಿಂದ ಪರ್ಸೆಂಟೇಜ್ ಆಧಾರದಲ್ಲಿ ಲಂಚದ ಹಣ ಸಂಗ್ರಹಿಸುತ್ತಿದ್ದರು.

ಕೊರೋನಾದಿಂದ ಮೃತಪಟ್ಟ ವ್ಯಕ್ತಿಯ ಬೆಲೆಬಾಳುವ ವಸ್ತುಗಳು ಕಳವು

ಕೊರೋನಾ ಸೋಂಕಿನಿಂದ ಮೃತಪಟ್ಟ ವ್ಯಕ್ತಿವೊಬ್ಬರಿಂದ ಬೆಲೆಬಾಳುವ ವಸ್ತುಗಳನ್ನು ಆಸ್ಪತ್ರೆಯಲ್ಲಿ ಕಳವು ಮಾಡಿರುವ ಆರೋಪ ಕೇಳಿಬಂದಿದೆ. ಅತ್ತಿಬೆಲೆಯಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ಆಸ್ಪತ್ರೆಯಲ್ಲಿ ಮೂರು ದಿನಗಳ ಹಿಂದೆ ವ್ಯಕ್ತಿಯೊಬ್ಬರು ಸೋಂಕಿನಿಂದ ಮೃತಪಟ್ಟಿದ್ದರು.

ಬೆಂಗಳೂರಿನ ಆಕ್ಸಫರ್ಡ್ ಆಸ್ಪತ್ರೆಯಲ್ಲಿ ಕೊರೋನಾ ಪೀಡಿತ ವ್ಯಕ್ತಿಯ ಮೃತದೇಹದ ಬಗ್ಗೆ ನಿರ್ಲಕ್ಷ್ಯ

ಕೊರೋನಾದಿಂದ​ಮೃತಪಟ್ಟ ವ್ಯಕ್ತಿಯ ಶವವನ್ನು ಆಸ್ಪತ್ರೆಯ ನೆಲದ ಮೇಲೆ ಹಾಗೆಯೆ ಬಿಟ್ಟು ನಿರ್ಲಕ್ಷ್ಯ ತೋರಿರುವ ಘಟನೆ ಇಲ್ಲಿನ ಅತ್ತಿಬೆಲೆ-ಯಡವನಹಳ್ಳಿ ಗೇಟ್​​ ಬಳಿ ಇರುವ ಆಕ್ಸ್​​​​​ಫರ್ಡ್​​​​ ಆಸ್ಪತ್ರೆಯಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.

ಯಾದಗಿರಿಯಲ್ಲಿ ಹಾಸಿಗೆ ಇಲ್ಲದ ಕಾರಣ ಕೊರೋನಾ ಪೀಡಿತನನ್ನು ದಾಖಲಿಸಲು ನಕಾರ!

ಇಲ್ಲಿಯ ಭೀಮೇಶ ಎಂಬ ಹೆಸರಿನ ಕೊರೋನಾ ಪೀಡಿತ ರೋಗಿಗೆ ಹಾಸಿಗೆ ಇಲ್ಲ ಎಂದು ಹೇಳಿ ಇಲ್ಲಿನ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಲು ನಿರಾಕರಿಸಲಾಯಿತು. ‘ಭೀಮೇಶನಿಗೆ ಏನೂ ಆಗಿಲ್ಲ’ ಎಂದು ವೈದ್ಯರು ವಾಪಾಸು ಕಳಿಸಲು ನೋಡಿದರು.