ಕಲಬುರ್ಗಿಯಲ್ಲಿ ಆಕ್ಸಿಜನ್ ಸಿಲಿಂಡರ್‌ನೊಂದಿಗೆ ಆಸ್ಪತ್ರೆಗೆ ದಾಖಲಾಗಲು ಆಟೊದಲ್ಲಿ ಅಲೆದ ಮಹಿಳೆ!
ಜಿಲ್ಲೆಯಲ್ಲಿ ಹಾಸಿಗೆ ಸಿಗದ ಕಾರಣ ರೋಗಿಗಳು ವಿವಿಧ ಆಸ್ಪತ್ರೆಗಳಿಗೆ ಅಲೆಯಬೇಕಾಗುತ್ತಿದೆ. ಇಲ್ಲಿನ ಬಸವ ನಗರದ 55 ವರ್ಷದ ಮಹಿಳೆ ಕೆಮ್ಮು ಮತ್ತು ಉಸಿರಾಟದ ಸಮಸ್ಯೆಯಿಂದ ಅಸ್ವಸ್ಥಗೊಂಡ ಕಾರಣ ಅವರನ್ನು ಕುಟುಂಬದವರು ಖಾಸಗಿ ಆಸ್ಪತ್ರೆಯೊಂದಕ್ಕೆ ಕರೆದೊಯ್ದರು.