ಹಾಟ್ ಸ್ಪ್ರಿಂಗ್ಸ್, ಗೊಗ್ರಾ ಮತ್ತು ದೆಪ್ಸಾಂಗ್‌ನಿಂದ ಹಿಂದೆ ಸರಿಯಲು ಚೀನಾದಿಂದ ನಕಾರ
ಚೀನಾವು ಪೂರ್ವ ಲಡಾಖ್‌ನ ಹಾಟ್ ಸ್ಪ್ರಿಂಗ್ಸ್, ಗೊಗ್ರಾ ಮತ್ತು ದೆಪ್ಸಾಂಗ್‌ನಲ್ಲಿ ಗಡಿಯಿಂದ ತನ್ನ ಸೈನ್ಯವನ್ನು ಹಿಂತೆಗೆದುಕೊಳ್ಳಲು ನಿರಾಕರಿಸಿದೆ ಎಂದು ತಿಳಿದುಬಂದಿದೆ. ಕಳೆದ ವಾರ ನಡೆದ ೧೧ ನೇ ಸುತ್ತಿನ ಮಿಲಿಟರಿ ಮಟ್ಟದ ಮಾತುಕತೆಯಲ್ಲಿ ಭಾರತ ಮತ್ತು ಚೀನಾ ೧೩ ಗಂಟೆಗಳ ಕಾಲ ಚರ್ಚೆ ನಡೆಸಿವೆ.