ಚೀನಾದ ಸೇನೆಯಿಂದ ಟಿಬೆಟ್‍ನಲ್ಲಿ ರಹಸ್ಯವಾಗಿ ಹೊಸ ಕಮಾಂಡರ್ ನ ನೇಮಕ

ಚೀನಾ ವಿಶ್ವಾಸದ್ರೋಹಿ ಆಗಿರುವುದರಿಂದ, ಭಾರತವು ಅದರ ಪ್ರತಿಯೊಂದು ಕೃತಿಯ ಮೇಲೆ ನಿಗಾವಿಟ್ಟು ಜಾಗರೂಕರಾಗಿರುವುದು ಯೋಗ್ಯವಾಗಿದೆ ! ಚೀನಾವು ಧೂರ್ತತನ ತೋರಿಸಿದರೆ, ಅದಕ್ಕೆ ಪ್ರತ್ಯುತ್ತರ ನೀಡಲು ಭಾರತವು ಸಿದ್ಧವಾಗಿರಬೇಕು !

ಅಂತ್ಯ ಸಂಸ್ಕಾರಕ್ಕಾಗಿ ಸಾಲ ಮಾಡಿ ಸ್ಮಶಾನಭೂಮಿಯ ಸಿಬ್ಬಂದಿಗೆ ಲಂಚ ಕೊಟ್ಟ ಮಹಿಳೆ

ಬೀದಿ ಬೀದಿ ವ್ಯಾಪಾರ ಮಾಡುವ ರಾಧಮ್ಮ ಹೆಸರಿನ ಮಹಿಳೆ ಬಡ್ಡಿ ಸಹಿತ ಸಾಲ ತಂದು ಆಯಂಬುಲೆನ್ಸ್‌ಗೆ ೫ ಸಾವಿರ ಹಾಗೂ ಚಿತಾಗಾರ ಸಿಬ್ಬಂದಿಗೆ ೩ ಸಾವಿರ ನೀಡಿ ಮೃತ ಸೋಂಕಿತನ ಅಂತ್ಯಕ್ರಿಯೆ ನೆರವೇರಿಸಿದ ದಾರುಣ ಘಟನೆಯು ಶುಕ್ರವಾರ ಯಲಹಂಕದ ಮೇಡಿ ಚಿತಾಗಾರದಲ್ಲಿ ನಡೆದಿದೆ.

ಆಸ್ಪತ್ರೆಯಲ್ಲಿ ಕೊರೋನಾ ರೋಗಿಗಳ ಚಿಕಿತ್ಸೆಯಲ್ಲಿ ನಿರ್ಲಕ್ಷ್ಯವಾಗುತ್ತಿದೆ ಎಂದು ದೂರು ನೀಡಿದ್ದಕ್ಕಾಗಿ ಸೈನಿಕನಿಗೆ ಥಳಿತ

ತನ್ನ ತಾಯಿಗೆ ಸರಿಯಾಗಿ ಚಿಕಿತ್ಸೆ ನೀಡಿಲ್ಲ ಎಂದು ಆರೋಪಿಸಿರುವ ಸೈನಿಕ ಶ್ರೀನಿವಾಸ ಅವರನ್ನು ಶ್ರೀನಿವಾಸಪುರ ಸರಕಾರಿ ಆಸ್ಪತ್ರೆಯ ಆವರಣದಲ್ಲಿಯೇ ಸಿಬ್ಬಂದಿಗಳು ಹೊಡೆದಿದ್ದಾರೆ. ಅದರಲ್ಲೂ ವಿಶೇಷವೆಂದರೆ ಈ ಪೊಲೀಸರ ಸಮ್ಮುಖದಲ್ಲಿ ಈ ಹಲ್ಲೆಯು ನಡೆದಿದೆ.

ರಾಷ್ಟ್ರೀಯ ಭದ್ರತೆಗೆ ಅಪಾಯವಿದೆ ಎಂದು ಶ್ರೀಲಂಕಾದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಬುರ್ಖಾ ಧರಿಸಲು ನಿಷೇಧ

ದೇಶದ ಸಾರ್ವಜನಿಕ ಸ್ಥಳಗಳಲ್ಲಿ ಬುರ್ಖಾ ಧರಿಸುವುದನ್ನು ನಿಷೇಧಿಸುವ ಪ್ರಸ್ತಾಪಕ್ಕೆ ಶ್ರೀಲಂಕಾದ ಸಚಿವ ಸಂಪುಟವು ಅನುಮೋದನೆಯನ್ನು ನೀಡಿದೆ. ರಾಷ್ಟ್ರೀಯ ಭದ್ರತೆಗೆ ಅಪಾಯವಿರುವುದರಿಂದ ನಿಷೇಧವನ್ನು ಹೇರಲಾಗಿದೆ ಎಂದು ಸರಕಾರವು ಹೇಳಿದೆ.

ವಾರಣಾಸಿಯ ಕಾಶಿ ವಿಶ್ವನಾಥ ದೇವಾಲಯ ಪ್ರದೇಶದಲ್ಲಿ ಉರುಳಿದ ಬೃಹತ್ ಅಕ್ಷಯವಟ ಮರ !

ಕಾಶಿ ವಿಶ್ವನಾಥ ದೇವಸ್ಥಾನ ಪ್ರದೇಶದ ಅಕ್ಷಯವಟ ಹನುಮಾನ ಮಂದಿರ’ ಬಳಿ ದೊಡ್ಡದಾದ ಅಕ್ಷಯವಟ ಮರ ಏಪ್ರಿಲ್ ೨೮ ರಂದು ಉರುಳಿದೆ. ‘ಕಾಶಿ ವಿಶ್ವನಾಥ ದೇವಾಲಯದ ಆಡಳಿತವರ್ಗದವರ ನಿರ್ಲಕ್ಷ್ಯದಿಂದಲೇ ಉರುಳಿದೆ’ ಎಂದು ವಾರಣಾಸಿ ಮಹಂತ ಪರಿವಾರವು ಆರೋಪಿಸಿದೆ.

ಪಿಪಿಇ ಕಿಟ್ ಧರಿಸಿ ಕೋವಿಡ್ ಆಸ್ಪತ್ರೆಗೆ ತೆರಳಿ ಸೋಂಕಿತರ ಆರೋಗ್ಯ ವಿಚಾರಿಸಿದ ಆದಿಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ

ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್ ನಲ್ಲಿರುವ ಶ್ರೀ ಆದಿಚುಂಚನಗಿರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿತರನ್ನು ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಪಿಪಿಇ ಕಿಟ್ ಧರಿಸಿಕೊಂಡು ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿದ್ದಾರೆ.

ರಾಜಸ್ಥಾನದಲ್ಲಿ ಮಾಸ್ಕ್ ಧರಿಸದ ಸಾಧುಗಳನ್ನು ಥಳಿಸಿದ ಕಾಂಗ್ರೆಸ್‌ನ ತೃತೀಯಲಿಂಗಿ ಕಾರ್ಪೊರೇಟರ್

ಹನುಮನ್‌ಗಡದ ಪಿಲಿಬಂಗಾದ ಕಾಂಗ್ರೆಸ್ ನಪುಂಸಕ ಕಾರ್ಪೊರೇಟರ್ ಪೂನಂ ಮಹಂತ್ ಅವರು ಇಬ್ಬರು ಸಾಧುಗಳನ್ನು ಮಾಸ್ಕ್ ಧರಿಸಲಿಲ್ಲ ಎಂಬ ಕಾರಣಕ್ಕೆ ಹೊಡೆಯುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಪ್ರಸಾರವಾಗಿದೆ.

ಕೊರೋನಾ ನಿಯಮಗಳನ್ನು ಪಾಲಿಸಲು ಮದುವೆಗಳನ್ನೇ ನಿಲ್ಲಿಸಿದ ಜಿಲ್ಲಾಧಿಕಾರಿಯಿಂದ ಕ್ಷಮೆಯಾಚನೆ

ರಾಜ್ಯದ ಪಶ್ಚಿಮ ತ್ರಿಪುರಾದ ಜಿಲ್ಲಾಧಿಕಾರಿ ಶೈಲೇಶ್ ಕುಮಾರ್ ಯಾದವ್ ಇವರು ವಿವಾಹ ಸ್ಥಳಕ್ಕೆ ತೆರಳಿ ಮದುವೆಯನ್ನು ನಿಲ್ಲಿಸಿದರು. ನಂತರ ಅವರು ಟೀಕೆಗೆ ಗುರಿಯಾದಾಗ ಕ್ಷಮೆಯಾಚಿಸಿದ್ದಾರೆ.

ಪೊಲೀಸರು ರಾತ್ರಿಯಿಡೀ ಆಮ್ಲಜನಕ ವಾಹನವನ್ನು ತಡೆ ಹಿಡಿದು ನಿಲ್ಲಿಸಿದುದೇ ಕೊರೋನಾ ರೋಗಿಯ ಮರಣವಾಗಿದೆ ಎಂದು ಹೇಳಿಕೆ.

ಪೊಲೀಸರು ಇಲ್ಲಿ ರಾತ್ರಿಯಿಡೀ ಆಮ್ಲಜನಕವನ್ನು ಸಾಗಿಸುವ ವಾಹನವನ್ನು ನಿಲ್ಲಿಸಿದ್ದರಿಂದ ರೋಗಿಯೊಬ್ಬರು ಸಾವನ್ನಪ್ಪಿದ್ದಾರೆ. ಆದರೆ ಪೊಲೀಸರು ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದಾರೆ.

ಬಾಗಲಕೋಟೆಯಲ್ಲಿ ಲಂಚ ಸಂಗ್ರಹದ ಪ್ರಕರಣದಲ್ಲಿ ಆರೋಗ್ಯಾಧಿಕಾರಿಯ ಬಂಧನ

ಬಾಗಲಕೋಟೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಥಮ ದರ್ಜೆ ಸಹಾಯಕ ಮಹಾಂತೇಶ ನಿಡಸನೂರ ಇವರನ್ನು ಲಂಚ ಸಂಗ್ರಹದ ಪ್ರಕರಣದಲ್ಲಿ ಬಂಧಿಸಲಾಗಿದೆ. ಇವರು ಜಿಲ್ಲೆಯಲ್ಲಿರುವ ಆರೋಗ್ಯ ಇಲಾಖೆಯ ವಿವಿಧ ಕಚೇರಿಗಳಿಂದ ಪರ್ಸೆಂಟೇಜ್ ಆಧಾರದಲ್ಲಿ ಲಂಚದ ಹಣ ಸಂಗ್ರಹಿಸುತ್ತಿದ್ದರು.