ಬಲಿಪಾಡ್ಯ (ನವೆಂಬರ್ ೧೬)

ಬಲಿಪಾಡ್ಯದಂದು ೫ ಬಣ್ಣಗಳ ರಂಗೋಲಿಯಿಂದ ಬಲಿ ಮತ್ತು ಅವನ ಪತ್ನಿ ವಿಂಧ್ಯಾವಲಿಯ ಚಿತ್ರಗಳನ್ನು ಬಿಡಿಸಿ ಅವರ ಪೂಜೆಯನ್ನು ಮಾಡುತ್ತಾರೆ. ನಂತರ ಬಲಿ ಪ್ರೀತ್ಯರ್ಥ ದೀಪ ಮತ್ತು ವಸ್ತ್ರಗಳ ದಾನವನ್ನು ಮಾಡುತ್ತಾರೆ. ಈ ದಿನ ಪ್ರಾತಃಕಾಲ ಅಭ್ಯಂಗಸ್ನಾನ ಮಾಡಿದ ನಂತರ ಸ್ತ್ರೀಯರು ತಮ್ಮ ಪತಿಗೆ ಆರತಿಯನ್ನು ಬೆಳಗುತ್ತಾರೆ.

ಕೊರೋನಾ ಮಹಾಮಾರಿಯಿಂದ ಉದ್ಭವಿಸಿರುವ ಆಪತ್ಕಾಲದ ಸ್ಥಿತಿಯಲ್ಲಿ ದೀಪಾವಳಿ ಹಾಗೂ ತುಳಸಿಪೂಜೆ ಹೇಗೆ ಆಚರಿಸಬೇಕು ?

‘ಈ ವರ್ಷ ೧೩ ರಿಂದ ೧೬ ನವೆಂಬರ್ ಈ ಅವಧಿಯಲ್ಲಿ ದೀಪಾವಳಿ ಹಬ್ಬವಿದೆ. ಕೊರೋನಾ ಮಹಾಮಾರಿಯ ಹಿನ್ನೆಲೆಯಲ್ಲಿ ಜಾರಿಗೊಳಿಸಲಾಗಿದ್ದ ಸಂಚಾರ ಸಾರಿಗೆ ನಿರ್ಬಂಧವನ್ನು ಹಂತ ಹಂತವಾಗಿ ತೆರವುಗೊಳಿಸಲಾಗುತ್ತಿದ್ದು, ಜನಜೀವನ ಮೊದಲಿನಂತಾಗುತ್ತಿದ್ದರೂ, ಕೆಲವು ಸ್ಥಳಗಳಲ್ಲಿ ಸಾರ್ವಜನಿಕ ನಿರ್ಬಂಧಗಳಿಂದ ನಿತ್ಯದಂತೆ ದೀಪಾವಳಿಯನ್ನು ಆಚರಿಸಲು ಮಿತಿ ಇದೆ. ಇಂತಹ ಸ್ಥಳಗಳಲ್ಲಿ ದೀಪಾವಳಿಯನ್ನು ಹೇಗೆ ಆಚರಿಸಬೇಕು